ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಪ್ರಸ್ತುತ ಶೇ.1ಕ್ಕಿಂತಲೂ ಕಡಿಮೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಪ್ರಮಾಣ ಶೇ.1ಕ್ಕಿಂತಲೂ ಕಡಿಮೆಯಾಗಿದ್ದು, 100ಕಡಿಮೆ ಕರೋನಾ ಪಾಸಿಟಿವ್ ವ್ಯಕ್ತಿಗಳು ಜಿಲ್ಲೆಯಲ್ಲಿದ್ದಾರೆ. ಆದರೆ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದಿದ್ದಾರೆ.
ಸರ್ಕಾರದ ಸೂಚನೆಯಂತೆ ಕೋವಿಡ್ ಲಸಿಕೆಗಳನ್ನು ಸಂಗ್ರಹಿಸಲು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 113 ಕೋಲ್ಡ್ ಚೈನ್ಗಳನ್ನು ಗುರುತಿಸಲಾಗಿದೆ.
ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಗುರುತಿಸಲಾಗಿರುವ 12 ಸಾವಿರ ಮಂದಿಯ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post