ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ನಗರದ ಹಲವು ಭಾಗಗಳಲ್ಲಿ ಹಾಕಿರುವ ಕರ್ಫ್ಯೂ ಮುಗಿದ ನಂತರ ಬೇಕಾದರೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಒಂದು ವಾರ ಮಂಗಳೂರಿನಲ್ಲಿ ಇರಲಿ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಡುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್’ಗೆ ಟಾಂಗ್ ನೀಡಿದ್ದಾರೆ.
ಮಂಗಳೂರಿಗೆ ಭೇಟಿ ನೀಡಿದ ವೇಳೆ ಮಾತನಾಡಿರುವ ಅವರು, ನಗರದಲ್ಲಿ ಕರ್ಫ್ಯೂ ಮುಗಿದ ನಂತರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಮಂಗಳೂರಿನಲ್ಲಿ ಒಂದು ವಾರ ಇರಲಿ. ಅವರಿಗೆ ಬೇಕಾದ ವ್ಯವಸ್ಥೆ ಮಾಡಿಕೊಂಡುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಗೋಲಿಬಾರ್’ನಲ್ಲಿ ಇಬ್ಬರು ಮೃತರಾಗಿರುವ ಘಟನೆಗೆ ವಿಷಾದ ವ್ಯಕ್ತಪಡಿಸಿದ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದು, ಪರಿಹಾ ನೀಡುವ ಭರವಸೆ ನೀಡಿದ್ದಾರೆ.
ಇನ್ನು, ಸೋಮವಾರದಿಂದ ನಗರದಲ್ಲಿ ಕರ್ಫ್ಯೂ ಹಿಂಪಡೆಯಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಆಸೆ ನಮ್ಮದು. ಹೀಗಾಗಿ, ನಮ್ಮಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂಬ ಯಾವುದೇ ಬೇಧಭಾವವಿಲ್ಲ. ಶಾಂತಿ ಕಾಪಾಡಿ, ಎಲ್ಲರ ಹಬ್ಬಗಳ ಆಚರಣೆಗೂ ಸಹಕಾರ ನೀಡುವುದು ನಮ್ಮ ಕರ್ತವ್ಯವಾಗಿದ್ದು, ಅದನ್ನು ಮಾಡುತ್ತೇವೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post