ಕಲ್ಪ ಮೀಡಿಯಾ ಹೌಸ್ | ಮಂತ್ರಾಲಯ |
ದೇವಾಲಯ, ಮಠ ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಆಯಾ ಪ್ರಾಂತ್ಯದ ಜನರ ನೇತೃತ್ವದಲ್ಲಿಯೇ ನಡೆಯುವಂತಾಗಬೇಕು ಎಂದು ಮಂತ್ರಾಲಯ #Mantralayam ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು. ಈಗ ಲೌಕಿಕ ಕಾನೂನುಗಳಿಂದ ಇದೆಲ್ಲಾ ಸರ್ಕಾರದ ವಶದಲ್ಲಿ ಹೋಗಿದೆ. ಸರ್ಕಾರದ ರಾಜಕೀಯ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ ಪ್ರಕರಣದಂತಹ ತೊಂದರೆಗಳು ಆಗುತ್ತಿವೆ ಎಂದು ಬೇಸರಿಸಿದ್ದಾರೆ.
ಪ್ರಮುಖವಾಗಿ ಆಯಾ ಪ್ರಾಂತ್ಯದ ಮಠ ಹಾಗೂ ಮಠಗಳು ಸ್ಥಳೀಯರ ನೇತೃತ್ವದಲ್ಲಿಯೇ ನಡೆಯಬೇಕು. ಇದಕ್ಕಾಗಿ ಸನಾತನ ಧರ್ಮ ಪರಿರಕ್ಷಣ ಸಂಬಂಧ ಯೋಜನೆಯನ್ನು ನಾವು ಸಹ ಬೆಂಬಲಿಸುತ್ತೇವೆ. ನಮ್ಮ ಊರಿನ ಆಚಾರ-ಸಂಪ್ರದಾಯ ಬಗ್ಗೆ ಬೇರೆ ಯಾರೋ ಬಂದು ಹೇಳುವುದಲ್ಲಾ. ನಮ್ಮ ಊರಿನ ಹಿರಿಯರು, ಸಮುದಾಯದ ಹಿರಿಯರು, ವಿದ್ವಾಂಸರು, ಮಠಾಧೀಶರ ನೇತೃತ್ವದಲ್ಲಿ ನಡೆಯಬೇಕು ಎಂದಿದ್ದಾರೆ.
ಇದರೊಂದಿಗೆ ಎಲ್ಲ ಮಠಗಳು, ದೇವಾಲಯಗಳು ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಮುಜರಾಯಿ ಇಲಾಖೆಯಿಂದ ಮುಕ್ತವಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Also read: ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ
Discussion about this post