ಕಲ್ಪ ಮೀಡಿಯಾ ಹೌಸ್ | ಲಿಮಾ |
ಚಿನ್ನದ ಗಣಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 27 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಪೆರುವಿನಲ್ಲಿ ನಡೆದಿದ್ದು, ಬೆಂಕಿ ಅವಘಡದಲ್ಲಿ ಸಿಲುಕಿದ್ದ 175 ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಗಣಿಗಾರಿಕೆ ಕಂಪನಿ ತಿಳಿಸಿದೆ.
ಗಣಿಯ ಒಂದು ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಘಟನೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also read: ವಾಯುಸೇನೆಯ ಯುದ್ಧ ವಿಮಾನ ಪತನ: ಮೂವರು ದುರ್ಮರಣ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















