ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಪತ್ರಗಳ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿ ಅಮೃತ್ ಜಿ. ಎಂಬಾತನು ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಹೆಸರಿನಲ್ಲಿ ನಕಲಿ ಪತ್ರಗಳನ್ನು ಸೃಷ್ಟಿಸಿ, ಸುಮಾರು 150ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣ ಪಡೆದು ವಂಚನೆ ನಡೆಸಿರುವುದು ತಿಳಿದುಬಂದಿದೆ.
ನಿಗಮದ ಹೆಸರಿನಲ್ಲಿ ಸಾಲ ಮಂಜೂರು ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆಯಲು ಈ ವ್ಯಕ್ತಿ ಯತ್ನಿಸುತ್ತಿರುವುದರಿಂದ ಸಾರ್ವಜನಿಕರು ಯಾರೂ ಕೂಡ ಇಂತಹ ಆಮಿಷಗಳಿಗೆ ಒಳಗಾಗಿ ಹಣ ನೀಡಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also read: ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ
ಈ ವ್ಯಕ್ತಿಯೊಂದಿಗೆ ನಿಗಮಕ್ಕೆ ಯಾವುದೇ ಸಂಬಂಧವಿಲ್ಲದೆ, ಯಾವುದೇ ರೀತಿಯ ಅಧಿಕೃತ ಪತ್ರ ವ್ಯವಹಾರವೂ ನಡೆದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸಾರ್ವಜನಿಕರು ಇಂತಹ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















