ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿಎಆರ್ ಮೈದಾನದಲ್ಲಿ 2022ನೇ ಸಾಲಿನಲ್ಲಿ ಸ್ವತ್ತು ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ವಸ್ತುಗಳನ್ನು ಸಂಬಂಧಪಟ್ಟವರಿಗೆ ಹಿಂತಿರುಗಿಸಲಾಯಿತು.
2022ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 633 ಸ್ವತ್ತು ಕಳವು ಪ್ರಕರಣಗಳು ವರದಿಯಾಗಿದ್ದು, ಸದರಿ ಪ್ರಕರಣಗಳಲ್ಲಿ, 1 ಲಾಭಕ್ಕಾಗಿ ಕೊಲೆ, 5 ದರೋಡೆ, 24 ಸುಲಿಗೆ, 56 ಕನ್ನ ಕಳವು, 46 ಸಾಮಾನ್ಯ ಕಳವು, 4 ಜಾನುವಾರು ಕಳವು, 99 ವಾಹನ ಕಳವು ಹಾಗೂ 5 ವಂಚನೆ ಪ್ರಕರಣಗಳು ಸೇರಿದಂತೆ ಒಟ್ಟು 238 ಪ್ರಕರಣಗಳನ್ನು ಪತ್ತೆ ಮಾಡಿ ಅಂದಾಜು ಮೌಲ್ಯ 3,80,91,328ರೂ. ಗಳ ಬಂಗಾರದ ಆಭರಣಗಳು, ಬೆಳ್ಳಿಯ ಆಭರಣಗಳು, ಮೊಬೈಲ್ ಫೋನ್, ವಾಹನಗಳು, ಜಾನುವಾರು, ನಗದು ಹಣ, ಎಲೆಕ್ಟ್ರಾನಿಕ್ ವಸ್ತುಗಳು, ಅಡಿಕೆ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post