ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ನಿನ್ನೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಅವಕಾಶವನ್ನು ರಾಜ್ಯ ಸರ್ಕಾರ ನಿರಾಕರಿಸಿದ್ದು, ಲಾಕ್ ಡೌನ್ ಜಾರಿಯಲ್ಲಿರುವುದು ಕಾರಣವಾಗಿದೆ.
ಈ ಕುರಿತಂತೆ ಮಾತನಾಡಿರುವ ಸಚಿವ ಆರ್. ಅಶೋಕ್, ಕೊರೋನಾ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ನಟ ಬುಲೆಟ್ ಪ್ರಕಾಶ್ ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದೇ ರೀತಿಯಾಗಿ ಸೆಲೆಬ್ರಿಟಿಗಳು ಸಹ ಅಂತಿಮ ದರ್ಶನ ಪಡೆಯುವಂತಿಲ್ಲ ಎಂದವರು ತಿಳಿಸಿದ್ದಾರೆ.
ಪ್ರಕಾಶ್ ಅವರ ಸಂಬಂಧಿಕರು ಮಾತ್ರ ಅಂತಿಮ ದರ್ಶನ ಪಡೆಯಬಹುದಾಗಿದ್ದು, ದೂರದಿಂದಲೇ ನಮನ ಸಲ್ಲಿಸಿ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post