ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ರಾಜ್ಯದಲ್ಲಿ ಮುಂದುವರಿಕೆ ಕುರಿತಂತೆ ಇನ್ನೂ ಅನಿಶ್ಚಿತತೆ ಮುಂದುವರೆದಿದ್ದು, ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿ, ನಾಳೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯ ಸಚಿವ ಸಂಪುಟದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಣೆ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಬಹುತೇಕ ಸಚಿವರು ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಇತರ ರಾಜ್ಯಗಳ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿ, ಪ್ರಧಾನಿಯವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅನಾವಶ್ಯಕವಾಗಿ ಹೊರಬಂದರೆ ಕಠಿಣ ಕ್ರಮ
ಎಪ್ರಿಲ್ 14ರವರೆಗೂ ಲಾಕ್ ಡೌನ್ ಆದೇಶ ಉಲ್ಲಂಘಿಸಿ, ಅನಾವಶ್ಯಕವಾಗಿ ಮನೆಯಿಂದ ಹೊರಬಂದು, ತಿರುಗಾಡಿದರೆ ಈ ಮೊದಲಿಗಿಂತಲೂ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.
ಆದೇಶ ಹಾಗೂ ಪೊಲೀಸರ ನಿರ್ದೇಶನ ಉಲ್ಲಂಘಿಸಿ ಮನೆಯಿಂದ ಅನಾವಶ್ಯಕವಾಗಿ ಹೊರಬಂದರೆ ವಾಹನ ಜಪ್ತಿ ಮಾಡುವ ಜೊತೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದರು.
Get in Touch With Us info@kalpa.news Whatsapp: 9481252093
















