ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಡುತ್ತಿದ್ದ ನಾಲ್ವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದಂತೆ ಪ್ರತಿ ದಿನ ರಾತ್ರಿ ಕರ್ಫ್ಯೂ ಆದೇಶ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸಿ, ಸಕಾರಣವಿಲ್ಲದೇ ಕೆಲವರು ದ್ವಿಚಕ್ರ ವಾಹನದಲ್ಲಿ ತಿರುಗಾಡುತ್ತಿದ್ದರು. ಈ ವೇಳೆ ಅಂತಹವರನ್ನು ಹಿಡಿದು, ಪ್ರಕರಣ ದಾಖಲಿಸಲಾಗಿದೆ.
ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಹಾಗೂ ಬೈಕ್’ಗಳ ವಿರುದ್ಧವೂ ಸಹ ಎನ್’ಡಿಎಂಎ ಕಾಯ್ದೆಯ 51(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ರೀತಿಯಲ್ಲಿ ಯಾವುದೇ ವ್ಯಕ್ತಿಗಳು ಲಾಕ್ ಡೌನ್ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವ್ಯಕ್ತಿಗಳು ಮತ್ತು ಅವರ ವಾಹನಗಳ ವಿರುದ್ಧ ಎನ್’ಡಿಎಂಎ ಕಾಯ್ದೆಯ ಅಡಿ ಕ್ರಮ ಕೈಗೊಳ್ಳಲಾಗುತ್ತದ ಎಂದು ಪೊಲೀಸ್ ಅಧೀಕ್ಷಕರು ಎಚ್ಚರಿಸಿದ್ದಾರೆ.
Get In Touch With Us info@kalpa.news Whatsapp: 9481252093
















