No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

kalpa News by kalpa News
March 14, 2019
in Small Bytes, ಶಿಕಾರಿಪುರ
0
ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ
Share on FacebookShare on TwitterShare on WhatsApp

ಶಿಕಾರಿಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಜವಾಬ್ದಾರಿ ಹೆಚ್ಚಿನದಾಗಿದ್ದು, ಚುನಾವಣಾ ಅಕ್ರಮವನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಪಾರದರ್ಶಕವಾಗಿ ನಡೆಸುವಲ್ಲಿ ಅತ್ಯಂತ ಜಾಗರೂಕತೆಯಿಂದ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶಿಕಾರಿಪುರ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾದರಿ ನೀತಿ ಸಂಹಿತೆ ತಂಡಗಳಿಗೆ ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಚುನಾವಣೆಗಳಲ್ಲಿ ಸೆಕ್ಟರ್ ಮಟ್ಟದ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿದ್ದು, ಈ ಬಾರಿಯ ಚುನಾವಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಹೆಚ್ಚು ಜವಾಬ್ದಾರಿಯನ್ನು ಚುನಾವಣಾ ಆಯೋಗ ವಹಿಸಿದೆ. ಕರ್ತವ್ಯದ ಸಂದರ್ಭದಲ್ಲಿ ಮೊಬೈಲ್, ಜಿಪಿಆರ್‌ಎಸ್, ಇಂಟರ್‌ನೆಟ್ ಸಂಪರ್ಕ ಕಡ್ಡಾಯವಾಗಿದ್ದು ಸಿ ವಿಜಿಲ್ ಆಪ್ ಮೂಲಕ ಪ್ರತಿ ಚಲನವಲನ ಆಯೋಗದ ಅರಿವಿಗೆ ಬರಲಿದೆ ಎಂದು ತಿಳಿಸಿದರು.

ಶಿಕಾರಿಪುರ ಅಭ್ಯರ್ಥಿಯ ಸ್ವಕ್ಷೇತ್ರ ಎಂಬ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಗುರುತಿಸಲ್ಪಟ್ಟಿದ್ದು, ಹಣ ಮದ್ಯ ಮತ್ತಿತರ ಅಕ್ರಮ ವಸ್ತುಗಳ ಸರಬರಾಜು ಬಗ್ಗೆ ಹೆಚ್ಚಿನ ನಿಗಾವಹಿಸಬೇಕಾಗಿದೆ. ಸ್ಟಾರ್ ಪ್ರಚಾರಕರು ಪಕ್ಷದ ಖಜಾಂಚಿ ಪತ್ರ ಪಡೆದು 1 ಲಕ್ಷ ಹಣ ಕಾರಿನಲ್ಲಿ ತೆಗೆದುಕೊಂಡು ಹೋಗಲು ಅವಕಾಶವಿದ್ದು, ಇತರೆ ವ್ಯಕ್ತಿಗಳು ಲಕ್ಷಾಂತರ ಹಣ ಸಾಗಿಸುತ್ತಿದ್ದಲ್ಲಿ ವಾಹನದಲ್ಲಿನ ಪ್ರತಿಯೊಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಅನುಮಾನ ಕಂಡು ಬಂದಲ್ಲಿ ಕೂಡಲೇ ದೂರು ದಾಖಲಿಸುವಂತೆ ಸಲಹೆ ನೀಡಿದರು. ಸಿ ವಿಜಿಲ್ ಆಪ್ ಮೂಲಕ ದಾಖಲಾಗುವ ದೂರುಗಳನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ 15 ನಿಮಿಷದಲ್ಲಿ ಸ್ಥಳಕ್ಕೆ ತೆರಳಿ 100 ನಿಮಿಷದಲ್ಲಿ ದೂರಿನ ಬಗ್ಗೆ ಸ್ಪಷ್ಟ ಮಾಹಿತಿಯನ್ನು ದಾಖಲಿಸುವಂತೆ ತಿಳಿಸಿದರು.

ಚುನಾವಣಾ ಸಭೆಗಳಲ್ಲಿ ವೇದಿಕೆ, ಕುರ್ಚಿ, ಮೈಕ್, ಶಾಮಿಯಾನ ಮತ್ತಿತರ ಪ್ರತಿಯೊಂದು ವಸ್ತುಗಳಿಗೆ ಹಣ ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಪಡೆದ ಪರವಾನಿಗೆಯನ್ನು ಮೀರಿದಲ್ಲಿ ಪ್ರತಿಯೊಂದನ್ನು ಸ್ಪಷ್ಟ ವಿಡಿಯೋ ಮೂಲಕ ದಾಖಲಿಸಿ ಚುನಾವಣಾಧಿಕಾರಿಗೆ ದೂರು ಸಲ್ಲಿಸುವಂತೆ ತಿಳಿಸಿದ ಅವರು, ಸಿ ವಿಜಿಲ್ ಆಪ್ ಮೂಲಕ ದಾಖಲಾದ ದೂರನ್ನು ಕಡ್ಡಾಯವಾಗಿ ಪರಿಶೀಲಿಸಿ ಕ್ರಮದ ಬಗ್ಗೆ ಮಾಹಿತಿಯನ್ನು ಸಲ್ಲಿಸುವಂತೆ ತಿಳಿಸಿದರು.

ಖಾಸಗಿ ವಾಹನದಲ್ಲಿ ಚುನಾವಣಾ ಸಭೆ ಸಮಾರಂಭಗಳಿಗೆ ತೆರಳುವವರ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ತಿಳಿಸಿದ ಅವರು, ಸಭೆಯಲ್ಲಿ ಸೀಮಿತ ಕಾರ್ಯಕರ್ತರಿಗೆ ಊಟಕ್ಕೆ ಅನುಮತಿ ನೀಡಲಾಗುವುದು. ವಾಹನಗಳಲ್ಲಿ ಪ್ರಚಾರ ಸಾಮಗ್ರಿ ಅನುಮತಿ ಕಡ್ಡಾಯವಾಗಿದ್ದು ತಪ್ಪಿದಲ್ಲಿ ದೂರು ದಾಖಲಿಸುವಂತೆ ತಿಳಿಸಿದರು. ಸ್ಟಾರ್ ಪ್ರಚಾರಕರ ಕಾರ್ಯಕ್ರಮದಲ್ಲಿ ಪ್ರತಿಯೊಂದು ಚೆಕ್ ಪೋಸ್ಟ್‌ ನಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮವನ್ನು ಅನುಸರಿಸಬೇಕು, ಕರ್ತವ್ಯದಲ್ಲಿನ ನಿರ್ಲಕ್ಷಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುವುದು ಮತದಾನಕ್ಕೆ ಮತದಾರರಿಗೆ ಅಡ್ಡಿ ಪಡಿಸುವ ಬೂತ್‌ಗಳನ್ನು ಗುರುತಿಸಲಾಗಿದ್ದು ಬಿಡುವಿನ ವೇಳೆಯಲ್ಲಿ ಮತದಾರರಲ್ಲಿ ಆತ್ಮವಿಶ್ವಾಸ ಮೂಡಿಸುವಂತೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ ಮಾತನಾಡಿ, ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ಕಡ್ಡಾಯವಾಗಿ ಜಾಕೆಟ್ ಧರಿಸಿ ಹೆಚ್ಚು ಜವಾಬ್ದಾರಿಯಿಂದ ವರ್ತಿಸುವಂತೆ ತಿಳಿಸಿದರು. ಹಣ ಮತ್ತಿತರ ವಸ್ತುಗಳು ವಾಹನದಲ್ಲಿ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳ ಸಮಕ್ಷಮದಲ್ಲಿ ಪಂಚನಾಮೆ ಮೂಲಕ ಸಂಬಂದಿಸಿದ ವ್ಯಾಪ್ತಿಯ ಠಾಣೆಯಲ್ಲಿ ದೂರು ದಾಖಲಿಸುವಂತೆ ತಿಳಿಸಿದರು.

ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳ ವರದಿಯಲ್ಲಿನ ವ್ಯತ್ಯಾಸ ಬಗ್ಗೆ ಜಿಲ್ಲಾ ಕೇಂದ್ರದಲ್ಲಿ ಸರಿಪಡಿಸುವುದಾಗಿ ತಿಳಿಸಿದ ಅವರು ಈ ಹಿಂದಿನ ಚುನಾವಣೆಯಲ್ಲಿ ಅಕ್ರಮ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ದೂರು ದಾಖಲಾದ ವ್ಯಕ್ತಿಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಈ ಬಗ್ಗೆ ನೆಪಹೇಳದಂತೆ ಎಚ್ಚರಿಸಿದರು.

ತೋಟಗಾರಿಕೆ ಇಲಾಖೆ ನಿರ್ದೇಶಕ ಯೋಗೀಶ್ ಫ್ಲೈಯಿಂಗ್ ಸ್ಕ್ವಾಡ್ ಜವಾಬ್ದಾರಿ ಕರ್ತವ್ಯದ ಬಗ್ಗೆ ವಿವಿರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ.ರಂಗಸ್ವಾಮಿ, ತಹಸೀಲ್ದಾರ್ ಕವಿರಾಜ್, ಇಒ ಆನಂದ್‌ಕುಮಾರ್ ಸಹಿತ ತಾ.ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: Kalpa NewsKannada NewsLoksabha election 2019Malnad NewsShikaripuraShivamogga DC Dayanandಚುನಾವಣಾ ಸೂಕ್ಷ್ಮ ಪ್ರದೇಶಲೋಕಸಭಾ ಚುನಾವಣೆ-2019ಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಕೋಲಾರ ಜಿಲ್ಲೆಯಾದ್ಯಂತ ಜೂನ್ 1 ರಿಂದ ಹೆಲ್ಮೆಟ್ ಕಡ್ಡಾಯ

Next Post

ಶಿವಮೊಗ್ಗದಲ್ಲಿ ಭರ್ಜರಿ ಬೇಟೆ: ಭಾರೀ ಪ್ರಮಾಣದ ಮದ್ಯ, ಅಕ್ರಮ ಹಣ ವಶ

kalpa News

kalpa News

Next Post
ಶಿವಮೊಗ್ಗದಲ್ಲಿ ಭರ್ಜರಿ ಬೇಟೆ: ಭಾರೀ ಪ್ರಮಾಣದ ಮದ್ಯ, ಅಕ್ರಮ ಹಣ ವಶ

ಶಿವಮೊಗ್ಗದಲ್ಲಿ ಭರ್ಜರಿ ಬೇಟೆ: ಭಾರೀ ಪ್ರಮಾಣದ ಮದ್ಯ, ಅಕ್ರಮ ಹಣ ವಶ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL