ನವದೆಹಲಿ: ಸ್ವತಂತ್ರ ಭಾರತದ ಇತಿಹಾಸದಲ್ಲಿ ಐತಿಹಾಸಿಕ ಎನಿಸಿರುವ ಮುಂದುವರೆದ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಅನುಮೋದನೆಗೊಂಡಿದೆ.
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮುಂದುರೆದ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ನಿನ್ನೆ ನಿರ್ಣಯ ಕೈಗೊಂಡಿತ್ತು. ಇಂದು ಸಚಿವ ತಾವರ್ ಚಂದ್ ಗೆಹ್ಲೋಟ್ ಅವರು ಮಂಡಿಸಿದ್ದ ಮಸೂದೆ ಲೋಕಸಭೆಯಲ್ಲಿ ಇಂದು ರಾತ್ರಿ ಅನುಮೋದನೆಗೊಂಡು ಐತಿಹಾಸಿಕ ಕ್ಷಣಕ್ಕೆ ಸಂಸತ್ ಸಾಕ್ಷಿಯಾಯಿತು.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದ್ದ ಮಸೂದೆ ಪರ 323 ಮಂದಿ ಸದಸ್ಯರು ಮತ ಚಲಾಯಿಸಿದರೆ, ಕೇವಲ ಮೂರು ಸದಸ್ಯರು ಮಾತ್ರ ವಿರುದ್ದ ಮತ ಚಲಾಯಿಸಿದರು.
Discussion about this post