ಕಲ್ಪ ಮೀಡಿಯಾ ಹೌಸ್ | ಲಂಡನ್ |
ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ Rish Sunak ಆಯ್ಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ PM Narendra Modi ಸೇರಿದಂತೆ ಅನೇಕ ಗಣ್ಯರು ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ-ಬ್ರಿಟನ್ ಒಗ್ಗೂಡಿ ಜಾಗತಿಕ ಸಮಸ್ಯೆಗಳು ಹಾಗೂ 2030ರ ವರೆಗಿನ ಯೋಜನೆಗಳಿಗೆ ಕ್ರಿಯಾ ಯೋಜನೆ ರೂಪಿಸುವುದಕ್ಕೆ ಕಾರ್ಯನಿರ್ವಹಿಸುವ ಉದ್ದೇಶವಿದೆ. ಭಾರತ-ಬ್ರಿಟನ್ ನಡುವಿನ ಐತಿಹಾಸಿಕ ಒಪ್ಪಂದಗಳು ಆಧುನಿಕ ಸಹಭಾಗಿತ್ವವಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದು, ಬ್ರಿಟನ್ ನಲ್ಲಿರುವ ಅನಿವಾಸಿ ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
Warmest congratulations @RishiSunak! As you become UK PM, I look forward to working closely together on global issues, and implementing Roadmap 2030. Special Diwali wishes to the ‘living bridge’ of UK Indians, as we transform our historic ties into a modern partnership.
— Narendra Modi (@narendramodi) October 24, 2022

ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕರಾದ ಶ್ರೀ @RishiSunak ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.1/3 pic.twitter.com/y1zdfozb2i
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2022

Congratulations @RishiSunak on being elected Prime Minister of Great Britain.
ಇನ್ಫೋಸಿಸ್ ಸಂಸ್ಥಾಪಕ ಶ್ರೀ ನಾರಾಯಣ ಮೂರ್ತಿ ಹಾಗೂ ಶ್ರೀಮತಿ ಸುಧಾಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಅವರಿಗೆ ಅಭಿನಂದನೆಗಳು. #RishiSunak pic.twitter.com/AfHXMGNFSt
— B Y Raghavendra (@BYRBJP) October 24, 2022

ರಿಷಿ ಸುನಕ್ ಗೆ ಬರೋಬ್ಬರಿ 193 ಸಂಸದರು ಬೆಂಬಲ ನೀಡಿದ್ದು ಇನ್ನು ರಿಷಿ ಸುನಕ್ ಗೆ ಪ್ರಬಲ ಸ್ಪರ್ಧಿಯಾಗಿದ್ದ ಸಂಸದೆ ಪೆನ್ನಿ ಮೋರ್ಡಾಂಟ್ ಗೆ 26 ಸಂಸದರು ಮಾತ್ರ ಬೆಂಬಲ ನೀಡಿದ್ದು ಹೀಗಾಗಿ ಪ್ರಧಾನಿ ಹುದ್ದೆ ಸ್ಪರ್ಧೆಯಿಂದ ಮೋರ್ಡಾಂಟ್ ಹಿಂದೆ ಸರಿದಿದ್ದಾರೆ.

ಇನ್ಫೋಸಿಸ್ ನ ನಾರಾಯಣ ಮೂರ್ತಿ-ಸುಧಾ ಮೂರ್ತಿ ಅವರ ಅಳಿಯನೂ ಆಗಿರುವ ರಿಷಿ ಸುನಕ್ ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದ್ದಾರೆ.











Discussion about this post