No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

kalpa News by kalpa News
June 18, 2026
in Special Articles
1
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಪ್ರತಿ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ, ಮನಸ್ಸಿಗೆ ಹತ್ತಿರವಾಗುವ ಕಥೆಗಳನ್ನು ನೀಡುತ್ತಾ ಬಂದಿರುವ ಜೀ ಕನ್ನಡ, ತನ್ನ ವಾರಾಂತ್ಯದ ಸಿನಿಮಾ ಮನರಂಜನೆಯನ್ನು ಮತ್ತಷ್ಟು ರಂಗೇರಿಸುತ್ತಿದೆ. ಕನ್ನಡದ ಸೂಪರ್‌ಹಿಟ್ ಲವ್ ಮಾಕ್‌ಟೇಲ್ ಸೀರಿಸ್ ನ ಬಹು ನಿರೀಕ್ಷಿತ ಕೊನೆಯ ಭಾಗವಾದ ಲವ್ ಮಾಕ್‌ಟೇಲ್ 3 ಚಿತ್ರದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ ಅನ್ನು ಜೂನ್ 21 ರಂದು, ಸಂಜೆ 4:30 ಕ್ಕೆ ನಿಮ್ಮ ಮುಂದೆ ತರಲು ಸಿದ್ಧವಾಗಿದೆ.

ಲವ್ ಮಾಕ್‌ಟೇಲ್ 2 ಚಿತ್ರದ ನಂತರ ಹಲವು ವರ್ಷಗಳ ಬಳಿಕ ತೆರೆಕಂಡ ಲವ್ ಮಾಕ್‌ಟೇಲ್ 3 ಚಿತ್ರದಲ್ಲಿ ತಂದೆಯ ಪ್ರೀತಿ, ಕುಟುಂಬದ ಒಡನಾಟ, ಜವಾಬ್ದಾರಿ ಮತ್ತು ಎಂತಹ ಪರಿಸ್ಥಿತಿಯಲ್ಲೂ ಜೊತೆಗೆ ನಡೆದು ಸಾಗುವ ಕೌಟುಂಬಿಕ ಮೌಲ್ಯಗಳನ್ನು ತುಂಬಾ ಸುಂದರವಾಗಿ ತೋರಿಸಿದ್ದಾರೆ. ರಕ್ತ ಸಂಬಂಧಕ್ಕಿಂತ ಮಿಗಿಲಾದುದು ಏನೂ ಇಲ್ಲ ಎಂಬುದೇ ಈ ಚಿತ್ರದ ಮತ್ತೊಂದು ಹೈಲೈಟ್. ಭಾವನೆಗಳ ಹಲವು ಪದರಗಳನ್ನು ಒಳಗೊಂಡಿರುವ ಈ ಕಥೆ, ಪ್ರೀತಿ, ನೋವು ಮತ್ತು ಜೀವನದಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳು ಸಂಬಂಧಗಳನ್ನು ಹೇಗೆ ಕಾಪಾಡಿಕೊಳ್ಳುತ್ತವೆ ಎಂಬುದನ್ನು ಮನಮುಟ್ಟುವಂತೆ ಹೇಳುತ್ತದೆ. ಜೊತೆಗೆ, ಕಾಳಜಿ, ನಂಬಿಕೆ ಮತ್ತು ಬದ್ಧತೆಯ ಮೂಲಕ ಕಟ್ಟಿಕೊಳ್ಳುವ ಸಂಬಂಧಗಳು ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ಮನಮುಟ್ಟುವಂತೆ ಈ ಚಿತ್ರದಲ್ಲಿ ತೋರಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರು ನಿರ್ದೇಶಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತಾ ಸುನಿಲ್, ರೇಚಲ್ ಡೇವಿಡ್, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್ ಹಾಗೂ ಶ್ವೇತಾ ಆರ್. ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
PES Public School Shivamoggaಈ ಕಥೆಯ ಹೀರೋ ಆದಿತ್ಯ ಅಲಿಯಾಸ್ ಆದಿ (ಡಾರ್ಲಿಂಗ್ ಕೃಷ್ಣ), ತಾನು ದತ್ತು ಪಡೆದ ಮಗಳು ನಿಧಿಯನ್ನು ತನ್ನ ಸ್ವಂತ ಮಗಳಂತೆ ಜವಾಬ್ದಾರಿಯಿಂದ ಸಾಕುತ್ತಿರುತ್ತಾನೆ. ಆದಿ ಮತ್ತು ನಿಧಿಯ ಬದುಕು ಸಣ್ಣ ಸಣ್ಣ ಸಂತೋಷಗಳು, ಸುಂದರ ನೆನಪುಗಳು ಮತ್ತು ಅಪ್ಪ-ಮಗಳ ಅಚ್ಚುಮೆಚ್ಚಿನ ಬಾಂಧವ್ಯದ ಸುತ್ತ ಸಾಗುತ್ತದೆ. ಕೇರ್ ಟೇಕರ್ ಜಗ್ಗಾ ಮಮ್ಮಿ ಮತ್ತು ಆತ್ಮೀಯ ಸ್ನೇಹಿತ ವಿಜಯ್‌ನ ಬೆಂಬಲ ಇವರಿಗೆ ಸದಾ ಇರತ್ತೆ. ಆದರೆ, ಡಾ. ಶಾಂತಾ ಅವರು ನಿಧಿ ತನ್ನ ಸ್ವಂತ ಮೊಮ್ಮಗಳು ಎಂದು ಹೇಳಿಕೊಂಡು ಬಂದಾಗ, ಆದಿ ಮತ್ತು ನಿಧಿಯ ಶಾಂತ ಜೀವನದಲ್ಲಿ ದೊಡ್ಡ ತಿರುವು ಉಂಟಾಗುತ್ತದೆ. ಅಲ್ಲಿಂದ ಆರಂಭವಾಗುವ ಕಾನೂನು ಹೋರಾಟ ಮತ್ತು ಭಾವನಾತ್ಮಕ ಸಂಘರ್ಷ, ಅವರ ಬದುಕನ್ನು ಸಂಪೂರ್ಣವಾಗಿ ಬದಲಾಯಿಸುತ್ತದೆ. ಸವಾಲಿನ ಮೇಲೆ ಸವಾಲುಗಳು ಎದುರಾಗುತ್ತಿದ್ದಂತೆ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬಂದಾಗ, ತಾನು ಪ್ರೀತಿಯಿಂದ ಕಟ್ಟಿಕೊಂಡಿರುವ ಸುಂದರವಾದ ಕುಟುಂಬವನ್ನು ಉಳಿಸಿಕೊಳ್ಳಲು ಆದಿ ಮಾಡುವ ಹೋರಾಟ ಮನಕಲಕುವಂತಿದೆ.

ತಾನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವ ಮಗಳು ನಿಧಿಯಿಂದ ದೂರವಾಗುವ ಪರಿಸ್ಥಿತಿಯನ್ನು ಆದಿ ಹೇಗೆ ಎದುರಿಸುತ್ತಾನೆ? ಪ್ರೀತಿಯಿಂದ ಕಟ್ಟಿಕೊಂಡಿರುವ ತನ್ನ ಕುಟುಂಬವನ್ನು ಉಳಿಸಿಕೊಳ್ಳಲು ಅವನು ನಡೆಸುವ ಹೋರಾಟ ಸುಖಾಂತ್ಯ ಕಾಣುತ್ತಾ? ಇವೆಲ್ಲವನ್ನೂ ತಿಳ್ಕೊಳೋಕೆ ವೀಕ್ಷಿಸಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಲವ್ ಮಾಕ್ ಟೈಲ್ 3 ಜೂನ್ 21 ರಂದು ಸಂಜೆ 4:30 ರಿಂದ ಪ್ರಸಾರವಾಗಲಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Amrutha IyengarBENGALURUDarling KrishnaKannada NewsKannada News LiveKannada News OnlineKannada News WebsiteKannada WebsiteLatest News KannadaLove Mocktail 3Milana NagarajNews in KannadaNews KannadaZee Kannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

Next Post

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

kalpa News

kalpa News

Next Post
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

Comments 1

  1. Pingback: ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ » kalpa.news

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!