ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಪ್ರಯಾಗ್ ರಾಜ್ ಕುಂಭಮೇಳಕ್ಕೆ #Prayagraj Kumbhamela ತೆರಳಿದ್ದ ಕರ್ನಾಟಕ ಐವರು ಯಾತ್ರಿಕರು ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರುಪಾಪೂರ ಬಳಿ ನಡೆದಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು ಎನ್ನಲಾಗಿದೆ.
ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ ಮೀಟರ್ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.
Also read: ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪುರುಷರಿಗೂ ಆಸನ ಮೀಸಲು
ಸಚಿವ ಈಶ್ವರ್ ಖಂಡ್ರೆ ಸಂತಾಪ
ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಐವರು ಯಾತ್ರಿಕರು ದುರ್ಮರಣಕ್ಕೀಡಾಗಿರುವ ದುಃಖದ ಸುದ್ದಿ ಆಘಾತ ತಂದಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ನಾನು ಆಳವಾದ ಸಂತಾಪ ವ್ಯಕ್ತಪಡಿಸುತ್ತೇನೆ. ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಲಾರಿಯೊಂದಿಗೆ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು, 5 ಮಂದಿ ಸಾವನ್ನಪ್ಪಿದರೆ, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಲು ಹಾಗೂ ಮೃತದೇಹಗಳನ್ನು ಬೀದರ್‌ಗೆ ತರಲು ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಲ್ಲಿನ ಕರ್ನಾಟಕದ ಅಧಿಕಾರಿಯಾದ ಚನ್ನಪ್ಪ ಅವರೊಂದಿಗೆ ಸಂಪರ್ಕ ಹೊಂದಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಕುಟುಂಬಗಳಿಗೆ ನೆರವು ಒದಗಿಸಲು ತಿಳಿಸಿದ್ದೇನೆ. ಸರ್ಕಾರ ಈ ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತದೆ. ಮೃತರ ಕುಟುಂಬಗಳಿಗೆ ದೇವರು ದುಃಖ ಸಹಿಸುವ ಶಕ್ತಿಯನ್ನು ನೀಡಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post