ಕಲ್ಪ ಮೀಡಿಯಾ ಹೌಸ್
ಲಖನೌ: ಕೋವಿಡ್-19 ಪ್ರಕರಣಗಳ ಪ್ರತಿನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್‌ಡೌನ್ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ ಎಂದು ತಿಳಿದುಬಂದಿದೆ.
ಲಖನೌ, ಪ್ರಯಾಗ್ ರಾಜ್, ಕಾನ್ಫುರ ಮತ್ತು ಗೋರಖ್‌ಪುರದಲ್ಲಿ ಇಂದು ರಾತ್ರಿಯಿಂದ ಏಪ್ರಿಲ್ 26ರವರೆಗೂ ಲಾಕ್ ಡೌನ್ ಹೇರಲಾಗಿದೆ. ಸಾರ್ವಜನಿಕರಿಗೆ ಅಗತ್ಯವಿರುವ ದಿನನಿತ್ಯ ಬಳಕೆ ವಸ್ತುಗಳು ಹಾಗೂ ದಿನಸಿ ಅಂಗಡಿಗಳು, ಔಷಧದಂತಹ ಅವಶ್ಯಕ ಸೇವೆಗಳಿಗೆ ಈ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದ್ದು, ಕೋವಿಡ್-೧೯ ಔಷಧ, ಆಸ್ಪತ್ರೆಗಳಲ್ಲಿ ಸೂಕ್ತ ರೀತಿಯಲ್ಲಿ ಆಕ್ಸಿಜನ್ ಸೌಲಭ್ಯವನ್ನು ಒದಗಿಸಬೇಕೆಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಮುಖ್ಯಮಂತ್ರಿ ಕಚೇರಿಗೆ ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post