ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಬಡವರನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ 42 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 9 ಮಂದಿಯನ್ನು ಬಂಧಿಸಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಸೋನ್ಬದ್ರಾದಲ್ಲಿ ಪ್ರಕರಣ ನಡೆದಿದ್ದು, ಬಡವರು ಹಾಗೂ ಬುಡಕಟ್ಟು ಜನರನ್ನು ವಂಚನೆಯ ಮೂಲಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಇಲ್ಲಿನ ಚೋಪಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಹಿಯಾ ತೋಲಾ ನಿವಾಸಿ ನರಸಿಂಗ್ ಎಂಬುವರು ಬುಡಕಟ್ಟು ಜನರು ಮತ್ತು ಬಡವರನ್ನು ವಂಚನೆಯ ಮೂಲಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವAತೆ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು.
Also read: ಹುತಾತ್ಮ ಕ್ಯಾ.ಪ್ರಾಂಜಲ್ ನಿವಾಸಕ್ಕೆ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರ ಭೇಟಿ | ಕುಟುಂಬಕ್ಕೆ ಸಾಂತ್ವಾನ
ದೂರಿನ ಆಧಾರದ ಮೇಲೆ, ಗುರುವಾರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ 42 ಜನರ ವಿರುದ್ಧ ಎಫ್’ಐಆರ್ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 42 ಜನರ ವಿರುದ್ಧ ಪ್ರಕರಣ ದಾಖಲಿಸಿ, 9 ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಬಂಧಿತರಿಂದ ಅಪಾರ ಪ್ರಮಾಣದ ಧಾರ್ಮಿಕ ಪುಸ್ತಕಗಳು, ಪ್ರಚಾರ ಸಾಮಗ್ರಿಗಳು, ಲ್ಯಾಪ್ ಟಾಪ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post