ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಅಯೋಧ್ಯೆಯ ಶ್ರೀರಾಮಮಂದಿರವನ್ನು #Ayodhye Ram Mandir ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದಲ್ಲಿ ಅಪ್ರಾಪ್ತನೊಬ್ಬರನನ್ನು ಬಂಧಿಸಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಬಾಲಕ (ಹೆಸರು ಬಹಿರಂಗಗೊಂಡಿಲ್ಲ) ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಘಟನೆ ಹಿನ್ನೆಲೆ
ಕಳೆದ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್’ನ ತುರ್ತು ಸಹಾಯವಾಣಿಗೆ ಕರೆಮಾಡಿ, ಅಯೋಧ್ಯೆಯ ರಾಮಮಂದಿರಕ್ಕೆ ಬಾಂಬ್ ಇರಿಸಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.
Also read: ನಾಚಿಕೆ ಮಾನ ಮಾರ್ಯಾದೆ ಇಲ್ಲದ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಿ: ಬಿಜೆಪಿ ಆಗ್ರಹ
ತತಕ್ಷಣವೇ ಎಚ್ಚೆತ್ತ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿದ್ದ ಸ್ಥಳವನ್ನು ಪತ್ತೆ ಮಾಡಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post