ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಹಾಲಿನ ಟ್ಯಾಂಕರ್ ಗೆ #Milk Tanker ಡಬಲ್ ಡೆಕ್ಕರ್ ಬಸ್ #Double Decker Bus ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನ್ನಪ್ಪಿ #Death 20ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಸಿರುವ ಘಟನೆ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ.
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಬುಧವಾರ ಮುಂಜಾನೆ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿ ಸಂಪೂರ್ಣ ನುಜ್ಜಗುಜ್ಜಾಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿ, ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ #Yogi Adithyanath ಘಟನೆ ಬಗ್ಗೆ ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ದುಃಖದಲ್ಲಿರುವ ಕುಟುಂಬಗಳಿಗೆ ನನ್ನ ಸಂತಾಪವಿದೆ. ಸ್ಥಳದಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















