ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ CM Yogi Adithynath ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಿನ್ನೆಲೆ ಲಕ್ನೋದಲ್ಲಿ ಶುಕ್ರವಾರ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಶೇಷ ಆಹ್ವಾನಿತರಲ್ಲಿ ಒಬ್ಬರಾಾಗಿ ಪಾಲ್ಗೊಂಡ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳ Pejawara Shri Vishwaprasanna Shri ವಾಹನವೂ ಸರತಿಯಲ್ಲಿ ಮುಂದೆ ಹೋಗದ ಪರಿಸ್ಥಿತಿ ಎದುರಾದಾಗ ಶ್ರೀಗಳು ವಾಹನದಿಂದ ಇಳಿದು ಸುಮಾರು ಎರಡು ಕಿಮೀ ನಡೆದೇ ತೆರಳಿ ಸ್ಟೇಡಿಯಂ ತಲುಪಿದರು.
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ Atalbihari Vajapayee ಸ್ಟೇಡಿಯಂ ನಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರದ ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, PM Narendra Modi ಅಮಿತ್ ಶಾ, Amith Shah ಗಣ್ಯಾತಿಗಣ್ಯರು ಸೇರಿದಂತೆ ಲಕ್ಷಾಂತರ ಜನ ಸಮಾರಂಭಕ್ಕೆ ಆಗಮಿಸಿದ್ದರಿಂದ ಅವರ ಬೆಂಗಾವಲು ವಾಹನಗಳ ಸರತಿ ಸಾಲೇ ಪ್ರಮುಖ ರಸ್ತೆಗಳಲ್ಲಿ ಜಮಾಯಿಸಿದ್ದು, ಟ್ರಾಫಿಕ್ ಜಾಮ್ ನಲ್ಲಿ ಅನೇಕರು ಸಿಲುಕಿದರು.
ಶ್ರೀಗಳ ಜೊತೆ ಬೆಂಗಳೂರಿನ ಉದ್ಯಮಿ ರಾಮ್ ಪ್ರಸಾದ್, ವಾಸುದೇವ ಭಟ್ ಪೆರಂಪಳ್ಳಿ, ದೆಹಲಿ ಪೇಜಾವರ ಮಠದ ಮ್ಯಾನೇಜರ್ ದೇವಿಪ್ರಸಾದ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು. ರಾಜ್ಯದಿಂದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, Adichunchangiri Nirmalananda Shri ಇಸ್ಕಾನ್ ನ ISKON ಮಧುಪಂಡಿತ ದಾಸ್ ಕೂಡಾ ಆಗಮಿಸಿದ್ದರು
Also read: ವಿಧಾನಮಂಡಲ ಅಧಿವೇಶನದ ನಂತರ ಜನತಾ ಜಲಧಾರೆ ದಿನಾಂಕ ಘೋಷಣೆ: ಹೆಚ್‌ಡಿಕೆ
ದೇಶಾದ್ಯಂತ ಅನೇಕ ರಾಜ್ಯಗಳಿಂದ ನೂರಾರು ಸಾಧು ಸಂತರನ್ನು ಆಮಂತ್ರಿಸಲಾಗಿದ್ದು ಅವರ ಆತಿಥ್ಯಕ್ಕಾಗಿ ಹಿರಿಯ ಅಧಿಕಾರಿಗಳಾದ ಅವನೀಶ್ ಅವಸ್ಥಿ ,ಆರ್ ಪಿ ಸಿಂಗ್ , ಅಶೋಕ್ ತಿವಾರಿ , ಆರ್ ಬಿ ಎಸ್ ರಾವತ್ ಮೊದಲಾದವರ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಿ ಸುವ್ಯವಸ್ಥೆಯ ಆಸ್ಥೆ ವಹಿಸಲಾಗಿತ್ತು . ಸಮಾರಂಭದಲ್ಲೂ ಮಠಾಧೀಶರು ಸ್ವಾಮೀಜಿಯವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೊಳಿಸಲಾಗಿತ್ತು
ಯೋಗಿ ಮತ್ತೆ ಅಧಿಕಾರ ಸ್ವೀಕರಿಸುತ್ತಿರುವುದನ್ನು ಉತ್ತರ ಪ್ರದೇಶದ ಜನ ಸಂಭ್ರಮಿಸುತ್ತಿರುವುದು ಎಲ್ಲೆಲ್ಲೂ ಕಂಡು ಬಂತು . ರಸ್ತೆ ಇಕ್ಕೆಲಗಳಲ್ಲಿ , ವಿಮಾನ ನಿಲ್ದಾಣ ,ಬಸ್ ನಿಲ್ದಾಣ ಗಳಲ್ಲಿ ನೂರಾರು ನೃತ್ಯ ತಂಡಗಳ ನೃತ್ಯ ಪ್ರದರ್ಶನ ಬ್ಯಾಂಡ್ ಇತ್ಯಾದಿ ವಾದ್ಯಗಳನ್ನು ನುಡಿಸುತ್ತಾ ಸಂಭ್ರಮಿಸುತ್ತಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post