ಕಲ್ಪ ಮೀಡಿಯಾ ಹೌಸ್ | ಲಕ್ನೋ |
ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ #PM Modi ಅವರು ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ #Gangrape ಎಸಗಿದ್ದ ಘಟನೆ ಸಂಬಂಧ ವಾರಣಾಸಿ ಏರ್‌ಪೋರ್ಟ್‌ನಲ್ಲೇ ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್‌ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post