ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ Prashanth Kishor ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಈ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹೊಸ ಸಾಧನೆ ಮಾಡಲಿದೆ. ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವುದು ನಿಶ್ಚಿತ ಎಂದಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ಪರವಾಗಿ ಅಚ್ಚರಿಯ ಫಲಿತಾಂಶಕ್ಕೆ ಸಿದ್ಧರಾಗಿ ಎಂದಿದ್ದಾರೆ.
Also read: ಸೊರಬ | 8 ಎಕರೆಗೂ ಹೆಚ್ಚು ವ್ಯಾಪ್ತಿಯ ಮರಗಿಡಗಳ ಮಾರಣಹೋಮ | ತೀವ್ರ ಆಕ್ರೋಶ
ಟಿಎಂಸಿ ನನ್ನನ್ನು ಬಿಜೆಪಿ ಏಜೆಂಟ್ ಎಂದು ಕರೆಯುತ್ತದೆ ಎಂದು ನನಗೆ ತಿಳಿದಿದೆ. ಆದರೆ ಬಂಗಾಳದಲ್ಲಿ ಬಿಜೆಪಿ ಭಾರಿ ಪುನರಾಗಮನವನ್ನು ನಾನು ನೋಡುತ್ತೇನೆ. ಬಿಜೆಪಿ ಟಿಎಂಸಿಗಿಂತ ಉತ್ತಮ ಪ್ರದರ್ಶನ ನೀಡಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post