ಕಲ್ಪ ಮೀಡಿಯಾ ಹೌಸ್ | ಲಖನೌ |
ಹತ್ರಾಸ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತದಿಂದ #Hathras religious event stampede 120ಕ್ಕೂ ಹೆಚ್ಚು ಜನರು ಮೃತಪಟ್ಟ #Death ಘಟನೆಗೆ ಸಂಬಂಧಪಟ್ಟಂತೆ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ನಿನ್ನೆ ತಡರಾತ್ರಿ ಸಿಕಂದರ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ (FIR) ‘ಮುಖ್ಯ ಸೇವಾದಾರ’ ದೇವಪ್ರಕಾಶ್ ಮಧುಕರ್ ಮತ್ತು ಇತರ ಸಂಘಟಕರನ್ನು ಹೆಸರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Also read: ಗಮನಿಸಿ! ಜು.4ರಂದು ಶಿವಮೊಗ್ಗ ನಗರದ ಈ ಬಡಾವಣೆಯಲ್ಲಿ ವಿದ್ಯುತ್ ಇರುವುದಿಲ್ಲ

ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. 24 ಗಂಟೆಯೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post