ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಉತ್ತರಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಯೋಗಿ ಅವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆ ಇದೆ ಎನ್ನುವ ಮೂಲಕ ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಸರಿಸುಮಾರು 40 ಸಾವಿರ ಕೋಟಿ ರೂ. ವೆಚ್ಚದಲ್ಲಿ ತೆಗೆದುಕೊಂಡಿರುವ ಗಂಗಾ ಎಕ್ಸ್ ಪ್ರೆಸ್ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಮಾತನಾಡಿದ ಅವರು ಯುಪಿ ಫ್ಲಸ್ ಯೋಗಿ ಬಹುತ್ ಉಪಯೋಗಿ. ಕಳೆದ ಐದು ವರ್ಷಗಳ ಅವಧಿಯಲ್ಲಿ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಕೇಂದ್ರದ ಯೋಜನೆಗಳನ್ನು ರಾಜ್ಯಕ್ಕೆ ತರುವಲ್ಲಿ ಮತ್ತು ಅದನ್ನು ಸದುಪಯೋಗಪಡಿಸಿಕೊಳ್ಳುವುದು ಸಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಗೆ ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಂಡಾಡಿರುವುದು ಮತ್ತೊಮ್ಮೆ ಯೋಗಿ ಅವರನ್ನೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post