ಮದ್ದೂರು: ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಕಾರ್ಯಕ್ಕೆ ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಮಾನವನ ದೇಹದಲ್ಲಿ ತಲೆಯು ಪ್ರಮುಖ ಅಂಗವಾಗಿದ್ದು ರಸ್ತೆ ಅಪಘಾತಗಳು ಸಂಭವಿಸಿದಾಗ ತಲೆಗೆ ಹೆಚ್ಚು ಪೆಟ್ಟು ಬಿಳುವುದರಿಂದ ತಲೆಯ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯ ಹಾಕುವುದರಿಂದ ಸಾವನ್ನು ತಪ್ಪಿಸಬಹುದು ಎಂದರು.
ಮಂಡ್ಯ ಜಿಲ್ಲೆಯಲ್ಲಿ ವರ್ಷಕ್ಕೆ ರಸ್ತೆ ಅಪಘಾತದಲ್ಲಿ 350 ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದು, ಅತಿ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ. ತಲೆಗೆ ಹೆಲ್ಮೆಟ್ ಧರಿಸುವ ಮೂಲಕ ಸಾರ್ವಜನಿಕರು ಸಹಕರಿಸಲು ಕರೆ ನೀಡಿದರು.
ಪ್ರತಿ ತಾಲೂಕಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಹಂತ ಹಂತವಾಗಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ನಾಡಹಬ್ಬ ದಸರಾ ಉತ್ಸವದ ಅಂಗವಾಗಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಧಿಕ ಸಂಖ್ಯೆಯ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕರು ಮೊಬೈಲ್ ಫೋನ್ ಬಳಕೆ ಮತ್ತು ಮಾಡಬಾರದು ಎಂದು ಮನವಿ ಮಾಡಿದರು.
ನಂತರ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸಂಜಯ ವೃತ್ತದಿಂದ ಕೊಲ್ಲಿ ವೃತ್ತದ ವರಗೆ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ಡಿವೈಎಸ್ಪಿ ಎಚ್.ಎಂ. ಶೈಲೇಂದ್ರ ಸರ್ಕಲ್ ಇನ್‌ಸ್ ಪೆಕ್ಟರ್ ಮಹೇಶ್, ಸಂಚಾರಿ ಇನ್‌ಸ್ ಪೆಕ್ಟರ್ ಮೋಹನ್ ಡಿ. ಪಟೇಲ್ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ಗಿರೀಶ್ ರಾಜ್ ಬೋರ ನಾಯಕ





















