ಶಿವಮೊಗ್ಗ: ಲೋಕಸಭಾ ಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಎಸ್. ಮಧುಬಂಗಾರಪ್ಪ ನಿನ್ನೆ ಇಡಿಯ ದಿನ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ತಮ್ಮ ಪ್ರಚಾರ ಸಭೆಗಳನ್ನು ಒಂದು ಕ್ಷಣವೂ ಬಿಡುವು ತೆಗೆದುಕೊಳ್ಳದೇ ನಡೆಸಿದರು.
ಬೆಳಿಗ್ಗೆ ಅಶೋಕ ನಗರದ ಎಲ್.ಬಿ.ಎಸ್ ಕಾಲೋನಿಯಲ್ಲಿ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರ ನಿವಾಸದ ಬಳಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಆನಂತರ ಗಾಂಧಿ ಬಜಾರಿನ ಬಸವೇಶ್ವರ ದೇವಾಲಯದ ಸಭಾ ಭವನದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯತರ್ಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಗೆಲುವಿಗೆ ಕಾರ್ಯಕರ್ತರು ಹಗಲಿರುವಳು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಸಂಜೆ ಹೊಸಮನೆಯ ದೊಡ್ಡ ಹನುಮಂತಪ್ಪ ಛತ್ರದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಮಧು, ವಾರ್ಡ್’ನ ಪ್ರತಿ ಮನೆ ಮನೆಗೂ ತೆರಳಿ ಸಮ್ಮಿಶ್ರ ಸರ್ಕಾರದ ಸಾಧನೆಯನ್ನು ತಿಳಿಸುವ ಕಾರ್ಯ ಮಾಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಆನಂತರ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಧು ಬಂಗಾರಪ್ಪ, ಅಲ್ಪಸಂಖ್ಯಾತ ಮುಖಂಡರು ಹಾಗೂ ಕಾರ್ಯಕರ್ತರು ಈ ಬಾರಿ ಅಲ್ಪಸಂಖ್ಯಾತರ ಮತಗಳು ನೂರಕ್ಕೆ ನೂರರಷ್ಟು ಚಲಾವಣೆಯಾಗುವಂತೆ ತಾವುಗಳು ಜಾಗ್ರತೆಯನ್ನು ವಹಿಸಿ ಮತದಾನ ಕೇಂದ್ರಕ್ಕೆ ಬಂದು ಜೆಡಿಎಸ್’ಗೆ ಮತ ನೀಡುವಂತೆ ತಾವುಗಳು ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಬೇಕೆಂದು ವಿನಂತಿ ಮಾಡಿದರು.
ಲೋಕಸಭಾ ಚುನಾವಣಾ ಬಿಡುವಿಲ್ಲದ ಪ್ರಚಾರ ಸಭೆಗಳ ನಡುವೆಯೇ ಮಧು ಬಂಗಾರಪ್ಪ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಈ ಎಲ್ಲ ಪ್ರಚಾರ ಸಭೆಗಳಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್. ಎಂ.ಮಂಜುನಾಥ್ ಗೌಡ ಇದ್ದರು.
Discussion about this post