ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಬೈಂದೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭರ್ಜರಿ ನಿರಂತರ ಪ್ರಚಾರ ನಡೆಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ನಂತರ ಪ್ರಚಾರ ಕಾರ್ಯ ಕೈಗೊಂಡರು. ಮಾಜಿ ಶಾಸಕ ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಅವರು ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಬಡಾವರ, ನಾವುಡಾ, ಮಸ್ಕಿ ನಾವುಡ ಹಾಗೂ ಪದುವರಿಯಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರು.
ಆನಂತರ ಮಂಗಳೂರಿನ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿ ಗುರುಗಳ ದರ್ಶನ ಪಡೆದರು.
ಮಧು ಬಂಗಾರಪ್ಪನವರು ಬೈಂದೂರು ವಿಧಾನಸಭಾ ಕ್ಷೇತ್ರದ ಉಪ್ಪುoದದಲ್ಲಿ ಮಾಜಿ ಶಾಸ ಕರಾದ ಗೋಪಾಲ ಪೂಜಾರಿ ಯವರೊಂದಿಗೆ ಜಂಟಿ ಚುನಾವಣೆ ಪ್ರಚಾರ ಸಭೆ ನಡೆಸಿದರು. ರಾಜ್ಯ ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ಭಂಡಾರಿ ಯವರು ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
ಮಂಗಳೂರಿಗೆ ಭೇಟಿ ನೀಡಿದ ಮಧು ಬಂಗಾರಪ್ಪ, ಮಂಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ರೈ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
Discussion about this post