No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ವಿಶೇಷ ಪೂಜೆ

ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರ ನೇಮಕಕ್ಕೆ ಚಿಂತನೆ: ಮಧು ಬಂಗಾರಪ್ಪ

kalpa News by kalpa News
October 17, 2026
in News, ಶಿವಮೊಗ್ಗ
0
madhu bangarappa visits sigandur chandragutti temples
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದಸರಾ ಹಾಗೂ ನವರಾತ್ರಿ (Navaratri) ಉತ್ಸವದ ಹಿನ್ನೆಲೆಯಲ್ಲಿ ಶಿವಮೊಗ್ಗ (Shivamogga) ಜಿಲ್ಲಾ ಪ್ರವಾಸದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಜಿಲ್ಲೆಯ ವಿವಿಧ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಚಿವರು, ಅಗಲಿದ ರಂಗಭೂಮಿ ಕಲಾವಿದರ ಕುಟುಂಬಗಳಿಗೆ ಸಾಂತ್ವನ ಹೇಳಿ, ಹಿರಿಯ ಕಾಂಗ್ರೆಸ್ ಮುಖಂಡರ ಆರೋಗ್ಯ ವಿಚಾರಿಸಿದರು.

ಸಿಗಂದೂರು ಚೌಡೇಶ್ವರಿಗೆ ವಿಶೇಷ ಪೂಜೆ

ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗಾಗಿ ಆಯೋಜಿಸಲಾಗಿದ್ದ ಹತ್ತು ದಿನಗಳ ರಂಗನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹತ್ತು ಪ್ರಾಥಮಿಕ ಶಾಲೆಗಳ 300 ವಿದ್ಯಾರ್ಥಿಗಳಿಗೆ ಸಚಿವರು ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

https://kalpa.news/wp-content/uploads/2026/10/DKS_Dasara-1min-TV-Ad-.mp4

Madhu Bangarappa: ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರು

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಆರಂಭವಾಗಲಿರುವ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲಾಭಿರುಚಿ ಹಾಗೂ ರಂಗಭೂಮಿಯ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಮಕ್ಕಳ ಪ್ರತಿಭೆ ಗುರುತಿಸಿ ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಜಡೆ ಗ್ರಾಮದಲ್ಲಿ ದೇವಿಗೆ ಪೂಜೆ

ಸಿಗಂದೂರು ಭೇಟಿಗೂ ಮುನ್ನ ಸಚಿವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿದರು. ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಳಿಕ ಸೊರಬ ಪಟ್ಟಣದ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.

ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ್ದ ಶಿಲ್ಪಿಯನ್ನು ಇದೇ ಸಂದರ್ಭದಲ್ಲಿ ಸಚಿವರು ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು.

Shivamogga Dasara 2026 Page 17

ಚಂದ್ರಗುತ್ತಿ ರೇಣುಕಾಂಬೆ ದರ್ಶನ

ನಂತರ ಸೊರಬ ತಾಲ್ಲೂಕಿನ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ತುರ್ತು ಕಾರಣಗಳಿಂದ ಶ್ರೀ ರೇಣುಕಾಂಬಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು ದಸರಾ ಸಮಿತಿಯ ಸದಸ್ಯರನ್ನು ಭೇಟಿಯಾಗಿ, ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಚರಿಸುವಂತೆ ಶುಭ ಹಾರೈಸಿದರು. ಇದೇ ವೇಳೆ ದಸರಾ ಸಮಿತಿಯ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.

ದೇವೇಂದ್ರಪ್ಪ ತಲಗುಂದ ಕುಟುಂಬಕ್ಕೆ ಸಾಂತ್ವನ

ರಂಗಭೂಮಿಯ ಹಿರಿಯ ಕಲಾವಿದ ಹಾಗೂ ಸಚಿವರ ಆಪ್ತರಾಗಿದ್ದ ದೇವೇಂದ್ರಪ್ಪ ತಲಗುಂದ ಅವರು ಶುಕ್ರವಾರ ನಿಧನರಾದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

“ದೇವೇಂದ್ರಪ್ಪ ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ನನಗೆ ಹಾಗೂ ನಾಡಿನ ರಂಗಭೂಮಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಸಚಿವರು ಸಂತಾಪ ಸೂಚಿಸಿದರು.

ಅದೇ ರೀತಿ ಇತ್ತೀಚೆಗೆ ನಿಧನರಾದ ಅಶೋಕ್ ಮರ್ಗಿ ಅವರ ತಂದೆ ರಾಮಪ್ಪ ಮರ್ಗಿ ಅವರ ಕುಟುಂಬದವರನ್ನು ಸೊರಬ ತಾಲ್ಲೂಕಿನ ಬರದವಳ್ಳಿಯಲ್ಲಿ ಭೇಟಿಯಾಗಿ ಸಚಿವರು ಸಾಂತ್ವನ ಹೇಳಿದರು.

ಹಿರಿಯ ಕಾಂಗ್ರೆಸ್ ನಾಯಕರ ಆರೋಗ್ಯ ವಿಚಾರಣೆ

ಸೊರಬ ತಾಲ್ಲೂಕಿನ ಜಡೆಕೋಟೆಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ತಮ್ಮ ಆಪ್ತರಾದ ಬಸವಂತಪ್ಪ ಅವರ ನಿವಾಸಕ್ಕೂ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅವರೊಂದಿಗೆ ಕೆಲಕಾಲ ಕಳೆದು ಧೈರ್ಯ ತುಂಬಿದರು. ಅವರು ಶೀಘ್ರ ಗುಣಮುಖರಾಗಿ ಮತ್ತೆ ಎಂದಿನಂತೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.

Also Read>> ಶಿವಮೊಗ್ಗ | ಅಂತರ ಶಾಲಾ ಸ್ಕೇಟಿಂಗ್ ಸ್ಪರ್ಧೆ: ರಾಜ್ಯಮಟ್ಟದ ಸ್ಕೇಟರ್‌ಗಳ ಆಯ್ಕೆಗೆ ಚಾಲನೆ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಒಡನಾಡಿಯಾಗಿದ್ದ ಜಡೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಆರ್.ಎಸ್. ಈರಪ್ಪ ಅವರನ್ನೂ ಸಚಿವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

“ಈರಪ್ಪ ಅವರ ಕುಟುಂಬದವರು ತೋರಿದ ಪ್ರೀತಿ ಮತ್ತು ವಿಶ್ವಾಸವನ್ನು ನಾನು ಎಂದಿಗೂ ಮರೆಯಲಾರೆ. ಬಂಗಾರಪ್ಪಾಜಿಯವರೊಂದಿಗೆ ಕಳೆದ ಕ್ಷಣಗಳನ್ನೆಲ್ಲ ನೆನಪಿನಲ್ಲಿಟ್ಟುಕೊಂಡಿರುವ ಇಂತಹ ಹಿರಿಯರ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ಆಶಿಸುತ್ತೇನೆ” ಎಂದು ಸಚಿವ ಮಧು ಬಂಗಾರಪ್ಪ ಭಾವುಕರಾಗಿ ನುಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Christ King

PES ShivamoggaKalpa News Advertising Disclaimer

Tags: Madhu BangarappaShivamoggaಚಂದ್ರಗುತ್ತಿ ಕ್ಷೇತ್ರಶಿವಮೊಗ್ಗಸಚಿವ ಮಧು ಬಂಗಾರಪ್ಪಸಿಗಂದೂರು ಚೌಡೇಶ್ವರಿ ದೇವಸ್ಥಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಅಂತರ ಶಾಲಾ ಸ್ಕೇಟಿಂಗ್ ಸ್ಪರ್ಧೆ: ರಾಜ್ಯಮಟ್ಟದ ಸ್ಕೇಟರ್‌ಗಳ ಆಯ್ಕೆಗೆ ಚಾಲನೆ

Next Post

ಶಿವಮೊಗ್ಗ ದಸರಾ | ಪುರಾತನ ನಾಣ್ಯಗಳ ಪ್ರದರ್ಶನಕ್ಕೆ ಬಿ.ಎಸ್. ಯಡಿಯೂರಪ್ಪ ಚಾಲನೆ

kalpa News

kalpa News

Next Post
shivamogga dasara ancient coins exhibition yediyurappa

ಶಿವಮೊಗ್ಗ ದಸರಾ | ಪುರಾತನ ನಾಣ್ಯಗಳ ಪ್ರದರ್ಶನಕ್ಕೆ ಬಿ.ಎಸ್. ಯಡಿಯೂರಪ್ಪ ಚಾಲನೆ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL