ಕಲ್ಪ ಮೀಡಿಯಾ ಹೌಸ್ | ಮಧುಗಿರಿ |
ಲಾರಿ ಹಾಗೂ ಕಾರಿನ ನಡುವೆ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ಬಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರನ್ನು ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ (26), ಕಾರ್ತಿಕ್ (28), ಹೇಮಂತ್ (30) ಎಂದು ಗುರುತಿಸಲಾಗಿದೆ. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇನಲ್ಲಿ ಸರಣಿ ಅಪಘಾತ: ಮೂವರ ಸಾವು
ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post