ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಪ್ರತಾಪ್ ಸಿಂಹ #PratapSimha ಅವರಿಗೆ ಲೋಕಸಭಾ ಚುನಾವಣೆ ಟಿಕೇಟ್ ಕೈ ತಪ್ಪಿದ್ದರೂ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #BYVijayendra ಹೇಳಿದ್ದು, ಅವರ ಈ ಮಾತು ಭಾರೀ ಕುತೂಹಲ ಮೂಡಿಸಿದೆ.
ಮಡಿಕೇರಿಯಲ್ಲಿ #Madikeri ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ತಪ್ಪಿದ್ದರೂ ಸಹ ಅವರ ಶ್ರಮಕ್ಕೆ ಮನ್ನಣೆ ಸಿಗುತ್ತದೆ ಎಂದು ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಉತ್ತಮ ಹುದ್ದೆ ಸಿಗಬಹುದೇ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ #YaduveeraKrishnadattaChamarajaWodeyar ಅವರು ಸುಮಾರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ. ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
Also read: ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ
ದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದಲ್ಲಿ ಆದ ತಪ್ಪುಗಳಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅವುಗಳನ್ನೆಲ್ಲಾ ಸರಿಪಡಿಸಿಕೊಂಡು ಮುನ್ನಡೆಯಲಾಗುತ್ತಿದೆ ಎಂದರು.
ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವರಾದ ಎಸ್.ಎ. ರಾಮದಾಸ್, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷರಾದ ರವಿ ಕಾಳಪ್ಪ, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post