ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ’ ಸಂಬಂಧ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಭಾನುವಾರ ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲಿಸಿದರು.
ಭಾಗಮಂಡಲದಲ್ಲಿ ಮುಡಿಶೆಡ್, ತ್ರಿವೇಣಿ ಸಂಗಮ ಬಳಿ ಪಿಂಡ ಪ್ರಧಾನ ವ್ಯವಸ್ಥೆ, ಶೌಚಾಲಯ, ಸ್ವಚ್ಚತೆಗೆ ಕ್ರಮ ಮತ್ತಿತರವನ್ನು ಪರಿಶೀಲಿಸಿದರು.

ವಾಹನಗಳ ನಿಲುಗಡೆಗೆ ವ್ಯವಸ್ಥೆ, ಬ್ಯಾರಿಕೇಡ್‍ಗಳ ನಿರ್ಮಾಣ, ಭಕ್ತಾಧಿಗಳಿಗೆ ಅನ್ನ ಸಂತರ್ಪನೆ ಹೀಗೆ ಹಲವು ಸಿದ್ಧತೆಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ವೀಕ್ಷಿಸಿದರು.
ಬಳಿಕ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸೋಮವಾರ ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ’ಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಸ್ ಕಲ್ಪಿಸಲಾಗಿದೆ. ಹಿಂದಿನಂತೆ ಪವಿತ್ರ ತೀರ್ಥೋದ್ಭವ ನಂತರ ಕೊಳದಲ್ಲಿ ಭಕ್ತಾಧಿಗಳಿಗೆ ಪವಿತ್ರ ಸ್ನಾನಕ್ಕೆ ಅವಕಾಶ ಇದೆ. ಭಕ್ತಾಧಿಗಳು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡಬಾರದು ಎಂದು ಸ್ಥಳೀಯ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮನವಿ ಮಾಡಿದರು.

ತೀರ್ಥೋದ್ಭವ ದಿನವಾದ ಸೋಮವಾರ ಸಂಜೆ 5 ಗಂಟೆಯಿಂದಲೇ ಪೂಜಾ ಕಾರ್ಯಗಳು ಆರಂಭವಾಗಲಿದೆ ಎಂದು ಪ್ರಮುಖ ಅರ್ಚಕರಾದ ಗುರುರಾಜ್ ಆಚಾರ್ಯ ಅವರು ಮಾಹಿತಿ ನೀಡಿದರು. 9 ಮಂದಿ ಅರ್ಚಕರು ಪವಿತ್ರ ತೀರ್ಥೋದ್ಭವದಲ್ಲಿ ಪೂಜಾ ವಿಧಿವಿಧಾನಗಳನ್ನು ನಡೆಸಲಿದ್ದಾರೆ ಎಂದರು.
Also read: ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೆ ಪರಿಗಣಿಸಿ: ಜಯಪ್ರಕಾಶ್ ಹೆಗ್ಡೆ
ಕುಂಕುಮಾರ್ಚನೆ, ಅಭಿಷೇಕ ಹಾಗೂ ಮಹಾಪೂಜಾ ಕಾರ್ಯಗಳು ಜರುಗಲಿವೆ. ನಾಡಿಗೆ ಒಳಿತಾಗುವಲ್ಲಿ ತಾಯಿ ಶ್ರೀ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಲಾಗುತ್ತದೆ ಎಂದು ಅರ್ಚಕರು ತಿಳಿಸಿದರು.

ತಾತ್ಕಾಲಿಕ ಕ್ಲಿನಿಕ್, ಶ್ರೀ ಕಾವೇರಿ ಮಾತೆ ಧಾರ್ಮಿಕ ಗೀತಗಾಯನ ಕಾರ್ಯಕ್ರಮ, ತಲಕಾವೇರಿಯಲ್ಲಿ ಶುಚಿತ್ವಕ್ಕೆ ಒತ್ತು ನೀಡುವುದು, ಅಲ್ಲಲ್ಲಿ ಡಸ್ಟ್‍ಬಿನ್ ಇಡುವುದು, ಹೀಗೆ ಹಲವು ಕಾರ್ಯಗಳು ನಡೆದಿವೆ.
ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ತಲಕಾವೇರಿ ಮತ್ತು ಭಾಗಮಂಡಲ ಭಗಂಡೇಶ್ವರ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ಕಾರ್ಯನಿರ್ವಹಣಾಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಲಕಾವೇರಿ ಪವಿತ್ರ ತೀರ್ಥೋಧ್ಬವ ಸಂಬಂಧ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಗಮನಹರಿಸಲಾಗಿದೆ. ಭಕ್ತಾಧಿಗಳು ಸಹಕರಿಸುವಂತೆ ಕೋರಿದರು.
‘ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಅವರು ತಲಕಾವೇರಿ ಪವಿತ್ರ ತೀರ್ಥೋಧ್ಬವ ಸಂಬಂಧ ಪೊಲೀಸ್ ಇಲಾಖೆಯಿಂದ ಮೂವರು ಡಿವೈಎಸ್‍ಪಿಗಳು, 7 ಇನ್ಸ್‍ಪೆಕ್ಟರ್, 17 ಸಬ್ ಇನ್ಸ್‍ಪೆಕ್ಟರ್, 300 ಪೊಲೀಸರು, 100 ಮಂದಿ ಮೀಸಲು ಪೊಲೀಸ್ ಸಶಸ್ತ್ರ ಪಡೆಯನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರ ನೇತೃತ್ವದಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಚಿನ್ನಾಭರಣವನ್ನು ತೆಗೆದುಕೊಂಡು ಹೋಗಿ ತಾಯಿ ಶ್ರೀ ಕಾವೇರಿ ಮಾತೆಗೆ ಭಾನುವಾರ ತೊಡಿಸಲಾಯಿತು. ತಾ.ಪಂ.ಇಒ ಶೇಖರ್ ಇನ್ನಿತರರಿದ್ದರು.










Discussion about this post