ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಾಲ್ಕನೇ ಹಂತದಡಿ ನಗರದ ಭಗವತಿ ದೇವಸ್ಥಾನ ಬಳಿಯಿಂದ ಗಾಳಿಬೀಡು ಜಂಕ್ಷನ್’ವರೆಗೆ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಡಿಕೇರಿ ನಗರದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿಗೆ 13 ಕೋಟಿ ರೂ. ವೆಚ್ಚದ ಟೆಂರ್ಡ ಅನುಮೋದನೆ ಆಗಿದ್ದು, ಆ ನಿಟ್ಟಿನಲ್ಲಿ ಶುಕ್ರವಾರ 2.43 ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

Also read: ಜ.23ರವರೆಗೆ ವಿಶಿಷ್ಟ ರೀತಿಯಲ್ಲಿ ಡೆಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್
ಮಡಿಕೇರಿ ನಗರಸಭೆಯು ತೆರಿಗೆ ಸಂಗ್ರಹದಲ್ಲಿ ಶೇಕಡಾವಾರು ಪ್ರಗತಿ ಸಾಧಿಸಿದೆ. ನಗರಸಭೆಯಿಂದ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಕೆಲಸಗಳು ನಡೆದಿವೆ. ನಗರದ ಎಲ್ಲಾ ರಸ್ತೆಗಳನ್ನು ಗುಂಡಿ ಮುಚ್ಚುವ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದು ಶಾಸಕರು ಹೇಳಿದರು.

ಮಡಿಕೇರಿ ನಗರದ ವಾರ್ಡ್ ನ.01 ರಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.8 ರಲ್ಲಿ ಒಳದಾರಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.9 ರಲ್ಲಿ ಗೆಜ್ಜೆ ಸಂಗಪ್ಪ ಸಮುದಾಯ ಭವನ ಉನ್ನತ್ತೀಕರಣ ಕಾಮಗಾರಿ, ವಾರ್ಡ್ ನಂ.13 ರ ಪುಟಾಣಿ ನಗರದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ. 14 ರ ಮುನೇಶ್ವರ ದೇವಸ್ಥಾನ ಹತ್ತಿರ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.23 ರ ಅಶೋಕ್ ಪುರದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಹೀಗೆ ಒಟ್ಟು 243.78 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ ಸುಬ್ರಮಣಿ, ಪೌರಾಯುಕ್ತರಾದ ವಿಜಯ, ನಗರಸಭೆ ಸದಸ್ಯರು, ಇತರರು ಇದ್ದರು.










Discussion about this post