ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮನುಷ್ಯನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆಯು ಸ್ಪೂರ್ತಿ ದಾಯಕವಾದದ್ದು ಎಂದು ಅಂತರಾಷ್ಟ್ರೀಯ ಸ್ಕ್ವಾಷ್ ಆಟಗಾರ್ತಿಯಾದ ಜೋಶ್ನಾ ಚಿನ್ನಪ್ಪ ಅವರು ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳ ಆದ್ಯತೆಗೆ ತಕ್ಕಂತೆ ವಿದ್ಯೆಯ ಜೊತೆಗೆ ಕ್ರೀಡೆಗೂ ಮಹತ್ವವನ್ನು ನೀಡುವಂತಾಗಬೇಕು. ಕ್ರೀಡೆಯ ಬಗ್ಗೆ ಮಕ್ಕಳಿಗೆ ಹೆಚ್ಚಿನ ಒಲವಿದ್ದರೆ ಅದನ್ನು ವಿದ್ಯೆ ಜೊತೆಗೆ ಪೋಷಿಸಿ ಪೋತ್ಸಾಹವನ್ನು ನೀಡಬೇಕು. ಕ್ರೀಡೆಯು ಜೀವನವನ್ನು ಉತ್ತಮ ರೀತಿಯಲ್ಲಿ ಜೀವಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
Also read: ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಪ್ರಯಾಣಿಕ ಸಾವು
ಕ್ರೀಡೆಯು ಜೀವನ, ಟೀಮ್ ವರ್ಕ್, ಸಮರ್ಪಣಾ ಭಾವ, ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ಬೆಳೆಸುತ್ತದೆ ಎಂದರು. ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ, ಕ್ರೀಡೆಯನ್ನು ಉಳಿಸಿ ಬೆಳೆಸಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಲೆಫ್ಟಿನೆಂಟ್ ಬಿ.ಜಿ. ಕುಮಾರ್, ಜೋಶ್ನಾ ಚಿಣ್ಣಪ್ಪ ಅವರ ತಂದೆ ಅಂಜನ್ ಚಿನ್ನಪ್ಪ, ನಿವೃತ್ತ ಸೇನಾಧಿಕಾರಿಗಳು, ನಿವೃತ್ತ ಪೊಲೀಸರು ಹಾಗೂ ಇತರರು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಸ್ವಾಗತಿಸಿದರು, ಡಿವೈಎಸ್ಪಿ ಗಜೇಂದ್ರ ಪ್ರಸಾದ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post