No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಅಪಾರ ಮೆಚ್ಚುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2023
in ಕೊಡಗು
0
ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಅಪಾರ ಮೆಚ್ಚುಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  |

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಫೆಬ್ರವರಿ, 06 ರವರೆಗೆ ನಗರದ ರಾಜಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ.

ಅಲ್ಲಿನ ಪುಷ್ಪಗಳಿಂದ ನಿರ್ಮಾಣವಾಗಿರುವ ಕಲಾಕೃತಿಗಳು ಒಂದಕ್ಕೊಂದು ಗಮನ ಸೆಳೆಯುತ್ತಿವೆ. ನಾಲ್ಕುನಾಡು ಅರಮನೆ ಕಲಾಕೃತಿಯ ಚಿತ್ರದಲ್ಲಿ ರಾಜರು ಕುಳಿತಿರುವುದು, ಹಾಗೆಯೇ ಕೊಡವ ಉಡುಪಿನಲ್ಲಿ ಸ್ವಾಗತಿಸುವ ಚಿತ್ರಗಳು, ಸಿಂಡ್ರೆಲಾ, ಹಾಗೆಯೇ ವೈನ್‍ಕಪ್ ಒಳಗೊಂಡ ಚಿತ್ರಗಳು, ಹೆಸರು ಕಾಳು ಮತ್ತು ಬಿಳಿ ಎಳ್ಳು ಮೂಲಕ ಕ್ರೀಯಾಶೀಲವಾಗಿ ನಿರ್ಮಾಣ ಮಾಡಿರುವ ಸೈನಿಕ, ಹೀಗೆ ರಾಜಸೀಟು ಉದ್ಯಾನವನದಲ್ಲಿ ಮತ್ತೊಮ್ಮೆ ಮೊಗದೊಮ್ಮೆ ನೋಡುವಂತೆ ಜನಮನ ಸೆಳೆಯುತ್ತಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್,ಅಂಬೇಡ್ಕರ್, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಕವಿ ಕುವೆಂಪು, ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರಬೋಸ್, ಭಗತ್‍ಸಿಂಗ್, ಪುನಿತ್ ರಾಜ್‍ಕುಮಾರ್ ಸೇರಿದಂತೆ ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ/ ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗಿದೆ. ವಿವಿಧ ಅಲಂಕಾರಿಕ ಗಿಡಗಳಾದ ಬೋನ್ಸ್‍ಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆ ಹಾಗೂ ಅಂಥೋರಿಯಂ ಹೂವಿನ ಪ್ರದರ್ಶನ ಗಮನ ಸೆಳೆಯುತ್ತಿದೆ.

ಚುನಾವಣೆ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ಮತ್ತೊಮ್ಮೆ ಓದುವಂತೆ ಮಾಡುತ್ತದೆ. 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿ, ಹೆಸರು ಸೇರ್ಪಡೆ ಮಾಡಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಿ, ಹೀಗೆ ಪ್ರತಿಯೊಂದು ಕಲಾಕೃತಿಗಳು ನೋಡುಗರನ್ನು ಮತ್ತೊಮ್ಮೆ ವೀಕ್ಷಿಸುವಂತೆ ಮಾಡುತ್ತವೆ.
ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕಾಫಿ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಸಿ.ಎಂ., ನಗರಸಭಾ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಮಾತನಾಡಿ ಫಲಪುಷ್ಪ ಪ್ರದರ್ಶನವನ್ನು ವರ್ಷದಿಂದ ವರ್ಷಕ್ಕೆ ಅತ್ಯುತ್ತಮವಾಗಿ ಏರ್ಪಡಿಸಲಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜಾಸೀಟು ಉದ್ಯಾನವನ ಫಲಪುಷ್ಪ ಪ್ರದರ್ಶನವು ಕಣ್ಮನ ಸೆಳೆಯುತ್ತಿದ್ದು, ಪ್ರವಾಸಿಗರಲ್ಲಿ ಒಂದು ರೀತಿ ಸಂತಸ ತರುತ್ತದೆ. ನಾಡಿನ ಪ್ರವಾಸಿಗರು ರಾಜಸೀಟು ಉದ್ಯಾನವನದ ಫಲಪುಷ್ಪ ಪ್ರದರ್ಶನ ವೀಕ್ಷಿಸುವಂತಾಗಬೇಕು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿಸಿ ಗ್ರೇಟರ್ ರಾಜಸೀಟು ಮತ್ತು ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ಇತರೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗು ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.
ಇನ್ನು ಗಾಂಧಿ ಮೈದಾನದಲ್ಲಿ 60 ಕ್ಕೂ ಹೆಚ್ಚು ವಸ್ತು ಪ್ರದರ್ಶನ ಮಳಿಗೆಯನ್ನು ನಿರ್ಮಾಣ ಮಾಡಲಾಗಿದ್ದು, ತೋಟಗಾರಿಕೆ, ಪಶುಪಾಲನೆ, ಕೃಷಿ, ಆಯುಷ್, ಕಾಫಿ ಮಂಡಳಿ, ಕೈಗಾರಿಕೆ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ, ಕಾರ್ಮಿಕ, ಹೀಗೆ ಹಲವು ಇಲಾಖೆಗಳು ವಸ್ತುಪ್ರದರ್ಶನ ಏರ್ಪಡಿಸಿರುವುದು ವಿಶೇಷವಾಗಿದೆ.

ವೈನ್ ಮೇಳಕ್ಕೆ ಚಾಲನೆ; ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ವೈನ್‍ಮೇಳವನ್ನು ಆಯೋಜಿಸಲಾಗಿದ್ದು, ಕೊಡಗಿನ ಹೋಮ್ ಮೇಡ್ ವೈನ್‍ಗಳು ಹಾಗೂ ಕರ್ನಾಟಕ ದ್ರಾಕ್ಷರಸ ಮಂಡಳಿ ವತಿಯಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ವೈನ್ ಮೇಳಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷರಾದ ನಾರಾಯಣ ರೆಡ್ಡಿ, ನಿರ್ದೇಶಕರಾದ ಅಭಿಲಾಷ್, ವ್ಯವಸ್ಥಾಪಕ ನಿರ್ದೇಶಕರಾದ ಸೋಮು, ಜನರಲ್ ಮ್ಯಾನೇಜರ್ ಸರ್ವೇಶ್ ಇತರರು ಇದ್ದರು.

ವೈನ್ ತಯಾರಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. ಒಟ್ಟಾರೆ ರಾಜಸೀಟಿ ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನ ಮತ್ತು ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನ ಗಮನ ಸೆಳೆಯುತ್ತವೆ.

ಮತ್ತಷ್ಟು ಮಾಹಿತಿ: ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ಸಾವಿರದಿಂದ 12 ಸಾವಿರ ಸಂಖ್ಯೆಯ ಹದಿನೈದರಿಂದ ಇಪ್ಪತ್ತು ಜಾತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ನಾಟಿ ಮಾಡಲಾಗಿದೆ.

ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು:
ಕೊಡಗಿನ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆಯ ಕಲಾಕೃತಿಯನ್ನು 18 ಅಡಿ ಎತ್ತರದಲ್ಲಿ 13 ಅಡಿ ಉದ್ದ 35 ಅಡಿ ಅಗಲದಲ್ಲಿ ವಿವಿಧ ಹೂವುಗಳಿಂದ ನಿರ್ಮಾಣ ಮಾಡಲಾಗಿದೆ.

ಮತದಾರರಿಗೆ ಮತದಾನನದ ಬಗ್ಗೆ ಅರಿವು ಮೂಡಿಸಲಾಗಿದೆ. ಕೊಡಗಿನ ಮುಖ್ಯ ಬೆಳೆ ಕಾಫಿಯನ್ನು ಪ್ರತಿಬಿಂಬಿಸಲು ಕಾಫಿ ಕಫ್ ಹಾಗೂ ಸಾಸರ್ ಮಾದರಿಯ ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಮಾಸಾ ಮತ್ತು ಬೀರ್, ಫೋಟೋ ಪ್ರೇಮ್, ಸೆಲ್ಫಿ ಜೋನ್ ಮಾದರಿಯನ್ನು ಹೂವು ಮತ್ತು ಎಲೆಗಳಿಂದ ತಯಾರಿಸಲಾಗಿದೆ.

ಗಾಂಧಿ ಮೈದಾನದಲ್ಲಿ 60 ವಿವಿಧ ವಸ್ತು ಪ್ರದರ್ಶನ ಮಳಿಗೆಯನ್ನು ನಿರ್ಮಿಸಲಾಗಿದ್ದು, ಇದರಲ್ಲಿ 20 ಮಳಿಗೆಯನ್ನು ತೋಟಗಾರಿಕೆ, ಕೃಷಿ, ಮೀನುಗಾರಿಕೆ, ಕೈಗಾರಿಕೆ ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದೆರಿಸಲಾಗಿದೆ. 40 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ರೈತರು ಬೆಳೆದಿರುವಂತಹ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರು ಬೆಳೆಗಳ ಪ್ರದರ್ಶಿಕೆ ಏರ್ಪಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಮಡಿಕೇರಿ
Share198Tweet123Send
Previous Post

ಪದ್ಮ ಪ್ರಶಸ್ತಿ ವಿಜೇತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ವಿಧಿವಶ

Next Post

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 11, 2026
ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

March 11, 2026
ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL