ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮಕ್ಕಳ ರಕ್ತ ಹೀನತೆ ಮತ್ತು ಅಪೌಷ್ಟಿಕತೆಯನ್ನು ತಡೆಯಲು ಆಲ್‍ಬೆಂಡಜೋಲ್ ಮಾತ್ರೆಯನ್ನು ಪಡೆಯುವಂತಾಗಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದಲ್ಲಿ ಜಂತು ಹುಳು ನಿವಾರಣೆ ಮಾಡಬಹುದು ಎಂದು ಜಿಪಂ ಸಿಇಒ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದ ‘ರಾಷ್ಟ್ರೀಯ ಜಂತು ಹುಳು ನಿವಾರಣಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾತನಾಡಿ ದೇಶದಾಧ್ಯಂತ ಆಗಸ್ಟ್, 10 ರಂದು ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ(ಎನ್‍ಡಿಡಿ) ಹಾಗೂ ಆಗಸ್ಟ್, 17 ರಂದು ಮೋಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡಲಾಗುತ್ತದೆ ಎಂದರು.
ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್, ಸ್ಕೌಟ್ಸ್ ಮತ್ತು ಗೈಡ್ಸ್ ಇಲಾಖೆಗಳ ಸಹಭಾಗಿತ್ವ ಅಗತ್ಯವಿದೆ ಎಂದರು.

ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು.
ಆಗಸ್ಟ್, 10 ರಂದು ನಡೆಯುವ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,37,981 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 32,103 ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 5,324, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 80,321 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 11,046 ಹಾಗೂ ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1646 ಇದ್ದು, ಇವರಿಗೆ ಮಾತ್ರ ವಿತರಿಸಲಾಗುತ್ತದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ಆನಂದ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್.ಮಂಜುನಾಥ್, ಸಂತ ಜೋಸೆಫರ ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ರೋಜಾ, ಬಿಸಿಎಂ ವ್ಯವಸ್ಥಾಪಕರಾದ ಕವಿತಾ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post