No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಡಿಕೇರಿ-ಮಕ್ಕಳ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗೆ ಗಮನಹರಿಸಿ: ಭಂವರ್ ಸಿಂಗ್ ಮೀನಾ

kalpa News by kalpa News
August 10, 2022
in ಕೊಡಗು, Small Bytes
0
ಮಡಿಕೇರಿ-ಮಕ್ಕಳ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗೆ ಗಮನಹರಿಸಿ: ಭಂವರ್ ಸಿಂಗ್ ಮೀನಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಮಕ್ಕಳ ರಕ್ತ ಹೀನತೆ ಮತ್ತು ಅಪೌಷ್ಟಿಕತೆಯನ್ನು ತಡೆಯಲು ಆಲ್‍ಬೆಂಡಜೋಲ್ ಮಾತ್ರೆಯನ್ನು ಪಡೆಯುವಂತಾಗಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದಲ್ಲಿ ಜಂತು ಹುಳು ನಿವಾರಣೆ ಮಾಡಬಹುದು ಎಂದು ಜಿಪಂ ಸಿಇಒ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದ ‘ರಾಷ್ಟ್ರೀಯ ಜಂತು ಹುಳು ನಿವಾರಣಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳಲ್ಲಿ ಜಂತು ಹುಳು ನಿವಾರಣೆ ಮಾಡಲು ಸರ್ಕಾರದಿಂದ ಆಲ್‍ಬೆಂಡಜೋಲ್ ಮಾತ್ರೆ ವಿತರಿಸಲಾಗುತ್ತಿದ್ದು, ಇದನ್ನು ಪಡೆಯುವಂತಾಗಬೇಕು. ಪೌಷ್ಠಿಕ ಆಹಾರ ಪಡೆಯುವುದರ ಜೊತೆಗೆ ಶುಚಿತ್ವಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕೈಗಳನ್ನು ಸರಿಯಾಗಿ ಸೋಪಿನಿಂದ ತೊಳೆಯಬೇಕು ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾತನಾಡಿ ದೇಶದಾಧ್ಯಂತ ಆಗಸ್ಟ್, 10 ರಂದು ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ(ಎನ್‍ಡಿಡಿ) ಹಾಗೂ ಆಗಸ್ಟ್, 17 ರಂದು ಮೋಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡಲಾಗುತ್ತದೆ ಎಂದರು.

ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್, ಸ್ಕೌಟ್ಸ್ ಮತ್ತು ಗೈಡ್ಸ್ ಇಲಾಖೆಗಳ ಸಹಭಾಗಿತ್ವ ಅಗತ್ಯವಿದೆ ಎಂದರು.
ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ
ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು.

ಆಗಸ್ಟ್, 10 ರಂದು ನಡೆಯುವ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,37,981 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 32,103 ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 5,324, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 80,321 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 11,046 ಹಾಗೂ ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1646 ಇದ್ದು, ಇವರಿಗೆ ಮಾತ್ರ ವಿತರಿಸಲಾಗುತ್ತದೆ ಎಂದರು.
ಕಳೆದ ನವೆಂಬರ್ ಮಾಹೆಯಲ್ಲಿ 2021 ರ ನವೆಂಬರ್, 23 ರಿಂದ ನವೆಂಬರ್, 27 ರವರೆಗೆ ನಡೆದ ಎನ್‍ಡಿಡಿ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯು 1,36,871 ಮಕ್ಕಳ ಗುರಿಯನ್ನು ಹೊಂದಿದ್ದು, 1,38,119 ಮಕ್ಕಳಿಗೆ ಆಲ್‍ಬೆಂಡಜೋಲ್ ಗುಳಿಗೆಯನ್ನು ನೀಡಲಾಗಿದ್ದು, ಶೇ.100.91 ಪ್ರಗತಿ ಸಾಧಿಸಲಾಗಿದೆ ಎಂದು ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾಹಿತಿ ನೀಡಿದರು.

ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ಆನಂದ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್.ಮಂಜುನಾಥ್, ಸಂತ ಜೋಸೆಫರ ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ರೋಜಾ, ಬಿಸಿಎಂ ವ್ಯವಸ್ಥಾಪಕರಾದ ಕವಿತಾ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Albendazole TabletAnemiaCoorgKannada News WebsiteKodaguLatest News KannadaMadikeriWormಆಲ್‍ಬೆಂಡಜೋಲ್ ಮಾತ್ರೆಜಂತು ಹುಳುಮಡಿಕೇರಿರಕ್ತ ಹೀನತೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಂದಗುಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ವಾರ್ಡ್ ಕಟ್ಟಡ ಉದ್ಘಾಟನೆ

Next Post

ಸಕಲರ ಒಳಿತಿಗಾಗಿ ರಾಯರಲ್ಲಿ ಪ್ರಾರ್ಥಿಸಿದ್ದೇವೆ: ಮಂತ್ರಾಲಯದಲ್ಲಿ ಸಂಸದ ರಾಘವೇಂದ್ರ ಹೇಳಿಕೆ

kalpa News

kalpa News

Next Post
ಸಕಲರ ಒಳಿತಿಗಾಗಿ ರಾಯರಲ್ಲಿ ಪ್ರಾರ್ಥಿಸಿದ್ದೇವೆ: ಮಂತ್ರಾಲಯದಲ್ಲಿ ಸಂಸದ ರಾಘವೇಂದ್ರ ಹೇಳಿಕೆ

ಸಕಲರ ಒಳಿತಿಗಾಗಿ ರಾಯರಲ್ಲಿ ಪ್ರಾರ್ಥಿಸಿದ್ದೇವೆ: ಮಂತ್ರಾಲಯದಲ್ಲಿ ಸಂಸದ ರಾಘವೇಂದ್ರ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL