ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನಗಳನ್ನು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ MP Prathap Simha ಅವರು ಹಸ್ತಾಂತರಿಸಿದರು.
ನಗರದ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಬಳಿ ಮೂಲಭೂತ ಸೌಲಭ್ಯ ಒಳಗೊಂಡ ತುರ್ತು ಚಿಕಿತ್ಸಾ ವಾಹನ (17 ಲಕ್ಷ ರೂ ವೆಚ್ಚ) ಮತ್ತು ಅಡ್ವಾನ್ಸ್ ಟೆಕ್ನಾಲಜಿ (ಐಸಿಯುನಲ್ಲಿರುವ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ) ಒಳಗೊಂಡಿರುವ 42 ಲಕ್ಷ ರೂ. ಒಟ್ಟು 59 ಲಕ್ಷ ರೂ ವೆಚ್ಚದ ತುರ್ತು ಚಿಕಿತ್ಸಾ ವಾಹನಗಳನ್ನು ವಿರಾಜಪೇಟೆ ಆಸ್ಪತ್ರೆಗೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಹಸ್ತಾಂತರಿಸಿದರು.
ಕೋವಿಡ್ Covid ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರು ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಪ್ರಾಥಮಿಕ ಆಸ್ಪತ್ರೆಗಳಲ್ಲೂ ಸಹ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ಹಂತ ಹಂತವಾಗಿ ಹಲವು ಆರೋಗ್ಯ ಯೋಜನೆಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಮಲ್ಟಿ ಸ್ಪೆಷಾಲಿಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ದೊರೆಯುವ ಆರೋಗ್ಯ ಸೇವೆಗಳು ಲಭ್ಯವಾಗಲಿವೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು.
ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ 100 ಕೋಟಿ ರೂ. ಬಿಡುಗಡೆ ಮಾಡಿ ಆಸ್ಪತ್ರೆ ಕಟ್ಟಡ ನಡೆಯುತ್ತಿದೆ. ಅದರಲ್ಲಿ 150 ಹಾಸಿಗೆಯ ಮಹಿಳಾ ವಿಭಾಗದ ಆಸ್ಪತ್ರೆಯನ್ನು ಈಗಾಗಲೇ ಮುಖ್ಯಮಂತ್ರಿ ಅವರು ಉದ್ಘಾಟಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ತಿಳಿಸಿದರು.
ಟ್ರಾಮ ಕೇರ್ ಸೆಂಟರ್‍ಗೆ ಸಹ 29 ಕೋಟಿ ರೂ. ಬಿಡುಗಡೆಯಾಗಿದೆ. ಆ ಆಸ್ಪತ್ರೆಗೂ ಸಹ ಚಾಲನೆ ನೀಡಲಾಗಿದ್ದು, ಕೊಡಗು ಜಿಲ್ಲೆಯ ಎಲ್ಲರಿಗೂ ಆರೋಗ್ಯ ಸೇವೆಗಳು ದೊರೆಯಲಿವೆ ಎಂದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ರೂಪೇಶ್ ಗೋಪಾಲ್, ಡಾ.ಸತೀಶ್, ಡಾ.ಆನಂದ್, ಡಾ.ಪುರುಷೋತ್ತಮ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post