ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳ ನಿಯಮ 1989 ರ (ತಿದ್ದುಪಡಿ ನಿಯಮಾವಳಿ 1900) ನಿಯಮ 221ಎ (5) ದಂಡಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಪ್ರದತ್ತವಾದ ಅಧಿಕಾರದಂತೆ ಬೆಟ್ಟಗೇರಿ-ನಾಪೋಕ್ಲು ರಸ್ತೆ ಸರಪಳಿ 5.50 ಕಿ.ಮೀ.ರಲ್ಲಿ (ಕೊಟ್ಟಮುಡಿ ಜಂಕ್ಷನ್ ಹತ್ತಿರ) ರಸ್ತೆ ಕುಸಿತವಾಗಿರುವ ರಸ್ತೆಯಲ್ಲಿ ಪ್ರಯಾಣಿಕರ ಲಘು ವಾಹನಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ರೀತಿಯ ಭಾರಿ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ, ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಮಡಿಕೇರಿಯಿಂದ ನಾಪೋಕ್ಲುವಿಗೆ ಸಂಚರಿಸುವ ಒಟ್ಟು ತೂಕ 16.2 ಟನ್ ಒಳಪಟ್ಟ ಭಾರಿ ವಾಹನಗಳು ಪಾಲೂರು ಜಂಕ್ಷನ್, ಬೋಳಿಬಾಣಿ ಮೂಲಕ ಕೊಟ್ಟಮುಡಿ ಜಂಕ್ಷನ್ ಸಂಪರ್ಕಿಸುವುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ. ಸೂಚನಾ ಫಲಕಗಳನ್ನು ಅಳವಡಿಸಲು ಹಾಗೂ ಕುಸಿತವಾಗಿರುವ ರಸ್ತೆಯ ತುರ್ತು ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಲು ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

 
	    	



 Loading ...
 Loading ... 
							



 
                
Discussion about this post