ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಟ್ಟ, ಮಾಕುಟ,್ಟ ಕರಿಕೆ ಸೇರಿ 3 ಅಂತಾರಾಜ್ಯ ಚೆಕ್ ಪೋಸ್ಟ್’ಗಳನ್ನು ತೆರೆಯಲಾಗಿದೆ. ಹಾಗೆಯೇ 11 ಅಂತರ್ ಜಿಲ್ಲಾ ಚೆಕ್ ಪೋಸ್ಟ್’ಗಳನ್ನು ತೆರೆಯಲಾಗಿದೆ ಎಂದರು.
ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗುತ್ತದೆ. ಶಾಂತಿಯುತ ಚುನಾವಣೆಗೆ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮವಹಿಸಲಾಗಿದೆ ಎಂದರು.
Also read: ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ
ಸ್ವೀಪ್ ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಎಸ್. ಆಕಾಶ್ ಅವರು ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿದ್ದ 65 ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗಿದೆ. ವೋಟರ್ ಹೆಲ್ಪ್’ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತರಾದ ಜಗದೀಶ್ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post