ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಬೃಹತ್ ಗಾತ್ರದ ಎರಡು ತಲೆಯ ಜೀವಂತ ಹಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಅರಣ್ಯ ಪೊಲೀಸ್ ದಳ ಬಂಧಿಸಿದೆ.
ತಾಲ್ಲೂಕಿನ ಜಾಗೇರಿ ಸಮೀಪ ಹಾವನ್ನು ಮಾರಾಟ ಮಾಡಲು ತೆರಳುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದರು.
ಕೊಪ್ಪಳ ಜಿಲ್ಲೆಯ ಅಬ್ಬಿಗೇರಿ ಗ್ರಾಮದ ಬಸವರಾಜು (36) ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಹನುಮಂತ (38) ಬಂಧಿತ ಆರೋಪಿಗಳು. ಇವರ ಬಳಿಯಿಂದ ಹಾವು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
Also read: ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ದಂಡ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post