ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿಯಾದ ಮಹಮ್ಮದ್ ಶಾಹಿಲ್ ಕೆ.ಯು. ಅವರು ಮಹಾರಾಷ್ಟ್ರದ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ 2023ರ ಮಾರ್ಚ್, 3 ರಿಂದ 05 ರವರೆಗೆ ನಡೆದ ಅಂತರ ರಾಷ್ಟ್ರೀಯ ಮಟ್ಟದ ಭಾರತ ಮತ್ತು ಬಾಂಗ್ಲಾದೇಶದ ಸೆಸ್ಟೋಬಾಲ್ ಟೂರ್ನಿಯಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿದ್ದರು.
ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ನಡೆದ ಮೂರು ಸರಣಿ ಪಂದ್ಯಾಟದಲ್ಲಿ 3-0 ಜಯಗಳಿಸುವ ಮೂಲಕ ಪಂದ್ಯದ ಉತ್ತಮ ಶೂಟರ್ ಪ್ರಶಸ್ತಿ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆಯುವ ಮೂಲಕ ಕಾಲೇಜಿಗೆ ಹಿರಿಮೆ ತಂದಿದ್ದಾರೆ ಎಂದು ಫಿ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post