No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಅ.17ರ ನಾಳೆ ಕಾವೇರಿ ತೀರ್ಥೋದ್ಭವ | ಎಷ್ಟೊತ್ತಿದೆ ಆಗಲಿದೆ? ಏನೆಲ್ಲಾ ಸಿದ್ದತೆ ಪೂರ್ಣಗೊಂಡಿದೆ? ಇಲ್ಲಿದೆ ವಿವರ

kalpa News by kalpa News
October 16, 2024
in ಕೊಡಗು
0
ಅ.17ರ ನಾಳೆ ಕಾವೇರಿ ತೀರ್ಥೋದ್ಭವ | ಎಷ್ಟೊತ್ತಿದೆ ಆಗಲಿದೆ? ಏನೆಲ್ಲಾ ಸಿದ್ದತೆ ಪೂರ್ಣಗೊಂಡಿದೆ? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ #Talakaveri ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ #Thirthodbhava ಪುಣ್ಯ ಕಾಲ ನೆರವೇರಲಿದೆ. ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, #D K Shivakumar ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ವೆಂಕಟೇಶ್ ಎಂ.ವಿ., ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ, ಸಿಬ್ಬಂದಿ ವರ್ಗದವರು ಇತರರು ಪಾಲ್ಗೊಳ್ಳಲಿದ್ದಾರೆ.

Also read: ಬೇಡಿಕೆಗಳ ಈಡೇರಿಕೆಗಾಗಿ ಅ.21ರಿಂದ ಮಲೆನಾಡಿನ ವಿವಿಧ ಸಂಘಟನೆಗಳ ಅನಿರ್ಧಿಷ್ಟಾವಧಿ ಧರಣಿ

ಭರದ ಸಿದ್ಧತೆ

ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ ಜಾತ್ರೆ ಸಂಬಂಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

https://kalpa.news/wp-content/uploads/2024/04/VID-20240426-WA0008.mp4

ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ ಮಾರ್ಗದ ರಸ್ತೆ ಗುಂಡಿಯನ್ನು ಮುಚ್ಚುವ ಕಾರ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೆಯೇ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ.

‘ತಲಕಾವೇರಿ ಜಾತ್ರೆ ಹಿನ್ನೆಲೆ ಭಾಗಮಂಡಲ ದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‍ಗಳು ಓಡಾಡಲಿದ್ದು, ಭಕ್ತಾಧಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ಮಾಹಿತಿ ನೀಡಿದ್ದಾರೆ.’

ತಲಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಭಕ್ತಾಧಿಗಳ ಪ್ರಸಾದ ವಿನಿಯೋಗಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ.

ಪರಿಸರ ಶುಚಿತ್ವ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳನ್ನು ಕೈಗೊಂಡಿದ್ದಾರೆ.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪೂರ್ವ ಸಿದ್ಧತೆ ಸಂಬಂಧ ಪರಿಶೀಲನೆ ನಡೆಸಿದ್ದಾರೆ.
ಮದ್ಯ ಮಾರಾಟ ನಿಷೇಧ:

ತಲಕಾವೇರಿ ತೀರ್ಥೋಧ್ಬವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ನನಗೆ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 16 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 17 ರ ಮಧ್ಯರಾತ್ರಿ 12 ಗಂಟೆಯವರೆಗೆ ತಲಕಾವೇರಿ, ಭಾಗಮಂಡಲ ಮತ್ತು ಚೇರಂಬಾಣೆ ಗ್ರಾಮದ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಪ್ಲಾಸ್ಟಿಕ್ ಬಿಂದಿಗೆ, ಬಾಟಲ್, ಕ್ಯಾನ್‍ಗಳ ಬಳಕೆ ನಿಷೇಧ: ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆ ನಡೆಯಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾಧಿಗಳು,ಯಾಥ್ರಾರ್ಥಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‍ಗಳನ್ನು ಬಳಕೆ ಮಾಡುತ್ತಿರುತ್ತಾರೆ.  ಅಧಿಸೂಚಿತ ಸಂಸ್ಥೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‍ಗಳನ್ನು ನಿರ್ಭಂದಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಇವರ ಆದೇಶದದಲ್ಲಿ ಸೂಚಿಸಿದ್ದಾರೆ.

ಆದ್ದರಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಕಲ್ಯಾಣಿ ಮತ್ತು ಪವಿತ್ರ ಕುಂಡಿಕೆಯ ಬಳಿ ಬಳಸದಂತೆ ನಿರ್ಭಂದಿಸಲಾಗಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: D K ShivakumarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMadikeriNews_in_KannadaNews_KannadaTalakaveriThirthodbhavaಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ತೀರ್ಥೋದ್ಭವಮಡಿಕೇರಿಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೇಡಿಕೆಗಳ ಈಡೇರಿಕೆಗಾಗಿ ಅ.21ರಿಂದ ಮಲೆನಾಡಿನ ವಿವಿಧ ಸಂಘಟನೆಗಳ ಅನಿರ್ಧಿಷ್ಟಾವಧಿ ಧರಣಿ

Next Post

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮುಂದುವರೆಯಲಿದೆ ವರುಣನ ರುದ್ರ ನರ್ತನ

kalpa News

kalpa News

Next Post
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮುಂದುವರೆಯಲಿದೆ ವರುಣನ ರುದ್ರ ನರ್ತನ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL