ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಮಡಿಕೇರಿ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ಮಹಿಳಾ ಅರಣ್ಯಾಧಿಕಾರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅರಣ್ಯ ಇಲಾಖೆಯಲ್ಲಿ ಡೆಪ್ಯೂಟಿ ರೇಂಜ್ ಫಾರೆಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ರಶ್ಮಿ (27) ಮೃತಪಟ್ಟವರು.
ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಇವರು ಕೊಡಗು ಜಿಲ್ಲೆ ಮಡಿಕೇರಿ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ತಂಗಿದ್ದರು. ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Also read: ಎಸ್ಎಸ್ಎಸ್ಸಿ ಜಾನಪದ ನೃತ್ಯ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post