ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ #Southwestern Graduate Constituency ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಮಡಿಕೇರಿಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಮಡಿಕೇರಿಯ ಫೀಲ್ಡ್ ಮಾರ್ಶಲ್ ಕಾರಿಯಪ್ಪ ಕಾಲೇಜಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಬಿಜೆಪಿಯ ವಿವಿಧ ನಾಯಕರು, ಮುಖಂಡರೊಂದಿಗೆ ತೆರಳಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.

Also read: ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿ: ಸೌರೆನ್ ಪಾಲ್
ಜಿಲ್ಲಾಧ್ಯಕ್ಷ ರವಿ ಕುಶಾಲಪ್ಪಪ್ಪ ಸಭೆ
ಇನ್ನು, ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಭೆ ಜಿಲ್ಲಾಧ್ಯಕ್ಷರಾದ ರವಿ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಓಂಕಾರೇಶ್ವರ ದೇಗುಲದಲ್ಲಿ ಪೂಜೆ
ಕೊಡಗು ಜಿಲ್ಲೆ ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಚುನಾವಣೆಯಲ್ಲಿ ವಿಜಯಶಾಲಿಯಾಗುವಂತೆ ಪ್ರಾರ್ಥಿಸಿ ವಿವಿಧ ನಾಯಕರು ಹಾಗೂ ಮುಖಂಡರೊಂದಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post