ಕಲ್ಪ ಮೀಡಿಯಾ ಹೌಸ್ | ರೇವಾ(ಮಧ್ಯಪ್ರದೇಶ) |
ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿ , 40 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಉತ್ತರ ಪ್ರದೇಶ ನಿವಾಸಿಗಳು ಎಂದು ವರದಿಯಾಗಿದೆ.
ಗಾಯಗೊಂಡ 40 ಮಂದಿಯಲ್ಲಿ 20 ಮಂದಿಯನ್ನು ಪ್ರಯಾಗರಾಜ್ (ಯುಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















