No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಚಾರ್ಯ ವೀರನಾರಾಯಣ ಪಾಂಡುರಂಗಿ ಅವರಿಗೆ ‘ಮಹಾಕವಿ ಕಾಳಿದಾಸ ಸಂಸ್ಕೃತವ್ರತಿ ರಾಷ್ಟ್ರೀಯ ಯುವ ಪ್ರಶಸ್ತಿ’

kalpa News by kalpa News
July 16, 2026
in ಬೆಂಗಳೂರು ನಗರ
0
ಆಚಾರ್ಯ ವೀರನಾರಾಯಣ ಪಾಂಡುರಂಗಿ ಅವರಿಗೆ ‘ಮಹಾಕವಿ ಕಾಳಿದಾಸ ಸಂಸ್ಕೃತವ್ರತಿ ರಾಷ್ಟ್ರೀಯ ಯುವ ಪ್ರಶಸ್ತಿ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಸಂಸ್ಕೃತ ಭಾಷೆ, ವೇದ-ಶಾಸ್ತ್ರ ಹಾಗೂ ಭಾರತೀಯ ಜ್ಞಾನಪರಂಪರೆಯ ಪ್ರಸಾರಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಖ್ಯಾತ ಸಂಸ್ಕೃತ ವಿದ್ವಾಂಸ ಆಚಾರ್ಯ ಡಾ. ವೀರನಾರಾಯಣ ಪಾಂಡುರಂಗಿ ಅವರಿಗೆ ಮಹಾರಾಷ್ಟ್ರದ ರಾಮಟೇಕ್‌ನ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯ (KKSU) ವತಿಯಿಂದ ಪ್ರತಿಷ್ಠಿತ “ಮಹಾಕವಿ ಕಾಳಿದಾಸ ಸಂಸ್ಕೃತವ್ರತಿ ರಾಷ್ಟ್ರೀಯ ಯುವ ಪ್ರಶಸ್ತಿ” ಪ್ರದಾನ ಮಾಡಲಾಯಿತು.

ಮಹಾಕವಿ ಕಾಳಿದಾಸ ದಿನಾಚರಣೆಯ ಅಂಗವಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಸ್ಕೃತ ಭಾಷೆ, ಸಾಹಿತ್ಯ, ಜ್ಯೋತಿಷ್ಯ, ಭಾರತೀಯ ತತ್ವಶಾಸ್ತ್ರ ಹಾಗೂ ಭಾರತೀಯ ಜ್ಞಾನಪರಂಪರೆಯ ಸಂರಕ್ಷಣೆ, ಸಂವರ್ಧನೆ ಮತ್ತು ಪ್ರಸಾರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ವಿದ್ವಾಂಸರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡಲಾಗುತ್ತದೆ. ಈ ಬಾರಿ ದೇಶದ ವಿವಿಧ ಭಾಗಗಳ ಹನ್ನೆರಡು ಮಂದಿ ಹಿರಿಯ ಮತ್ತು ಯುವ ಸಂಸ್ಕೃತ ವಿದ್ವಾಂಸರು ವಿವಿಧ ವಿಭಾಗಗಳಲ್ಲಿ ಸನ್ಮಾನಿಸಲ್ಪಟ್ಟರು.
JNNCE Shivamoggaಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕರಾಗಿರುವ ಡಾ. ವೀರನಾರಾಯಣ ಪಾಂಡುರಂಗಿ ಅವರು ವೇದಾಂತ, ದ್ವೈತ ತತ್ವಶಾಸ್ತ್ರ, ಸಂಸ್ಕೃತ ಸಾಹಿತ್ಯ ಹಾಗೂ ಭಾರತೀಯ ಜ್ಞಾನಪರಂಪರೆಯ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನೆಯಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸಂಶೋಧನಾ ಕೃತಿಗಳು, ಗ್ರಂಥಸಂಪಾದನೆ, ಉಪನ್ಯಾಸಗಳು ಹಾಗೂ ವಿದ್ಯಾರ್ಥಿಗಳಲ್ಲಿ ಸಂಸ್ಕೃತಾಭಿಮಾನ ಬೆಳೆಸುವ ಕಾರ್ಯ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ವಿವಿಧ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮೂಲಕ ಸಂಸ್ಕೃತ ಶಿಕ್ಷಣದ ವಿಸ್ತರಣೆಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ.

Also read: ಪಿಇಎಸ್ ಐಟಿಎಂ | ಐದು ದಿನಗಳ BWCN ಬೂಟ್‌ಕ್ಯಾಂಪ್‌ಗೆ ಚಾಲನೆ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಪ್ರಭಾರ ಕುಲಪತಿ ಡಾ. ಅತುಲ್ ಎನ್. ವೈದ್ಯ ಅವರು, ಭಾರತೀಯ ಸಂಸ್ಕೃತಿಯ ಮೂಲಾಧಾರವಾದ ಸಂಸ್ಕೃತ ಭಾಷೆಯ ಪುನರುಜ್ಜೀವನಕ್ಕೆ ಡಾ. ಪಾಂಡುರಂಗಿ ಅವರಂತಹ ವಿದ್ವಾಂಸರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು. ಯುವ ಪೀಳಿಗೆಯಲ್ಲಿ ಸಂಸ್ಕೃತ ಅಧ್ಯಯನದ ಆಸಕ್ತಿ ಹೆಚ್ಚಿಸಲು ಅವರ ಮಾರ್ಗದರ್ಶನ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು.

ಪ್ರಶಸ್ತಿಯೊಂದಿಗೆ ₹25,000 ನಗದು, ಪ್ರಶಸ್ತಿ ಫಲಕ, ಗೌರವಪತ್ರ, ಶಾಲು ಹಾಗೂ ಶ್ರೀಫಲ ನೀಡಿ ಗೌರವಿಸಲಾಯಿತು.

ಈ ರಾಷ್ಟ್ರೀಯ ಗೌರವಕ್ಕೆ ಶಿಕ್ಷಣತಜ್ಞರು, ಸಂಸ್ಕೃತ ವಿದ್ವಾಂಸರು, ಶಿಷ್ಯವೃಂದ ಹಾಗೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳು ಅಭಿನಂದನೆ ಸಲ್ಲಿಸಿದ್ದು, ಡಾ. ವೀರನಾರಾಯಣ ಪಾಂಡುರಂಗಿ ಅವರಿಗೆ ಸಂದ ಈ ಪ್ರಶಸ್ತಿ ಕರ್ನಾಟಕಕ್ಕೂ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: 'Mahakavi Kalidasa Samskrita Bharati National Youth Award'BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಇಎಸ್ ಐಟಿಎಂ | ಐದು ದಿನಗಳ BWCN ಬೂಟ್‌ಕ್ಯಾಂಪ್‌ಗೆ ಚಾಲನೆ

Next Post

ಕಲ್ಪಿತ ಡೇಟಾಕ್ಕೆ ಶರಾವತಿ ಕಣಿವೆ ಬಲಿಕೊಡಬೇಡಿ: ರಾಜ್ಯ ಸರಕಾರಕ್ಕೆ ಡಾ. ಸುಶ್ರುತ ಗೌಡ ಆಗ್ರಹ

kalpa News

kalpa News

Next Post
sushrutha-urges-suttur-sri-mysuru-dasara-inauguration

ಕಲ್ಪಿತ ಡೇಟಾಕ್ಕೆ ಶರಾವತಿ ಕಣಿವೆ ಬಲಿಕೊಡಬೇಡಿ: ರಾಜ್ಯ ಸರಕಾರಕ್ಕೆ ಡಾ. ಸುಶ್ರುತ ಗೌಡ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL