ಕಲ್ಪ ಮೀಡಿಯಾ ಹೌಸ್ | ಮಹಾರಾಷ್ಟ |
ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು Crane Colapse in Thane16 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಥಾಣೆಯ ಶಹಾಪುರದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು 16 ಕಾರ್ಮಿಕರು ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಚರಣೆ ನಡೆಯುತ್ತಿದ್ದು, ಪೊಲೀಸ್ ಸಿಬ್ಬಂದಿ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.
Also read: ಮಹಿಳಾ ಯಕ್ಷಗಾನ ಪ್ರದರ್ಶನ ಶ್ಲಾಘನೀಯ: ಶಂಕರ್ ಶೇಟ್ ಅಭಿಪ್ರಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post