ಕಲ್ಪ ಮೀಡಿಯಾ ಹೌಸ್ | ಮಹಾರಾಷ್ಟ್ರ(ಸಂಗಮನೇರ್) |
ಬಿಜೆಪಿ ಪಕ್ಷ ದೇಶದಲ್ಲಿ ವಸಾಹತುಶಾಹಿ ನೀತಿ ಪಾಲಿಸುತ್ತಿದ್ದು, ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

Also read: ಬಸವಣ್ಣನವರನ್ನು ಸಾಂಸ್ಕೃತಿಕ ರಾಯಭಾರಿಯನ್ನಾಗಿಸಿ: ಸರ್ಕಾರಕ್ಕೆ ಒತ್ತಾಯ
ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರ ಹಾಗೂ ವಚನ ಭ್ರಷ್ಟತೆ
ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಬಿಜೆಪಿಯನ್ನು ರಾಜ್ಯದ ಅಧಿಕಾರದಿಂದ ಕಿತ್ತೊಗೆಯಲು ಸಾಧ್ಯವಾಯಿತು. ಕರ್ನಾಟಕದಲ್ಲಿ 40% ಕಮೀಷನ್ ನ ಭ್ರಷ್ಟಾಚಾರ ನಡೆಯಲು ಬಿಜೆಪಿ ಕಾರಣ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆಯಿಂದ ಬೇಸತ್ತ ಕರ್ನಾಟಕದ ಜನ ಬಿಜೆಪಿಯನ್ನು ಕಿತ್ತೊಗೆದರು ಎಂದು ತಿಳಿಸಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ತಪ್ಪದೇ ಈಡೇರಿಸಲಾಯಿತು. ಸಂವಿಧಾನದಲ್ಲಿ ನಂಬಿಕೆಯಿರುವವರೆಲ್ಲರೂ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರಯತ್ನವನ್ನು ಕಾಂಗ್ರೆಸ್ ಸೇರಿದಂತೆ ಉಳಿದೆಲ್ಲ ಪಕ್ಷಗಳೂ ಮಾಡಬೇಕು ಎಂದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post