ಕಲ್ಪ ಮೀಡಿಯಾ ಹೌಸ್ | ಮಹಾರಾಷ್ಟ್ರ |
ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿ ಬಳಿಕ ನವಜಾತ ಶಿಶುವನ್ನು #New Born ಬಸ್ ನ ಕಿಟಕಿಯಿಂದ ಹೊರಗೆ ಎಸೆದ ಅಮಾನವೀಯ ಘಟನೆ ಮಹಾರಾಷ್ಟ್ರದ ಪರ್ಭಾನಿಯ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಸಮಯದಲ್ಲಿ ರಿತಿಕಾ ಧೇರೆ ಎಂದು ಗುರುತಿಸಲಾದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನೊಳಗೆ ಮಗುವಿಗೆ ಜನ್ಮ ನೀಡಿದರು. ಅವರ ಜೊತೆ ಆಕೆಯ ಪತಿ ಎಂದು ಹೇಳಿಕೊಂಡ ಅಲ್ತಾಫ್ ಶೇಖ್ ಕೂಡ ಇದ್ದ ಎನ್ನಲಾಗಿದೆ.

ಕೂಡಲೇ ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಸ್ ನ್ನು ತಡೆದು ಪ್ರಾಥಮಿಕ ವಿಚಾರಣೆಯ ನಂತರ ದಂಪತಿಯನ್ನು ಬಂಧಿಸಿತು. ವಿಚಾರಣೆಯ ಸಮಯದಲ್ಲಿ, ಮಗುವನ್ನು ಬೆಳೆಸಲು ತಮಗೆ ಸಾಧ್ಯವಿಲ್ಲ ಎಂದು ಹೇಳಿ ಮಗುವನ್ನು ಎಸೆದಿದ್ದಾಗಿ ಇಬ್ಬರೂ ಒಪ್ಪಿಕೊಂಡರು. ಚಲಿಸುವ ಬಸ್ಸಿನಿಂದ ಬಿದ್ದ ಪರಿಣಾಮ ಶಿಶು ಸಾವನ್ನಪ್ಪಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post