ಕಲ್ಪ ಮೀಡಿಯಾ ಹೌಸ್ | ಮುಂಬೈ |
ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬಾರಾಮತಿಯಲ್ಲಿ ಇಂದು ಮುಂಜಾನೆ ವಿಮಾನ ಲ್ಯಾಂಡ್ ಅಗುವಾಗ ವಿಮಾನ ಅಪಘಾತಕ್ಕೀಡಾಗಿದ್ದು, ಕ್ಷಣ ಮಾತ್ರದಲ್ಲಿ ಹೊತ್ತಿ ಉರಿದಿದೆ.
ಪರಿಣಾಮವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ 5 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇಬ್ಬರು ಸಿಬ್ಬಂದಿ (1 ಪಿಎಸ್’ಒ ಮತ್ತು 1 ಅಟೆಂಡೆAಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್’ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಿಂದ ಬದುಕುಳಿದಿಲ್ಲ ಎಂದು ಡಿಜಿಸಿಎ ತಿಳಿಸಿದೆ.
ಉಪಮುಖ್ಯಮಂತ್ರಿ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಕ್ಕಾಗಿ ತಮ್ಮ ತವರು ನಗರಕ್ಕೆ ಭೇಟಿ ನೀಡುತ್ತಿದ್ದರು.
ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ವಿಮಾನ ಲ್ಯಾಂಡಿಂಗ್ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















