ಮುಂಬೈ: ಪರಿಸರ ರಕ್ಷಣೆ ವಿಚಾರದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಾದ್ಯಂತ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬ್ಯಾನ್ ಮಾಡಿದ್ದು, ಇಂದಿನಿಂದಲೇ ಜಾರಿಗೆ ಬಂದಿದೆ.
ಸರ್ಕಾರದ ಆದೇಶ ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡಿದರೆ ಹಾಗೂ ಬಳಕೆ ಮಾಡಿದರೆ ಮೊದಲ ಬಾರಿಗೆ 5 ಸಾವಿರ ರೂ. ಎರಡನೆಯ ಬಾರಿಗೆ 10 ಸಾವಿರ ರೂ. ದಂಡ ಹಾಗೂ ಮೂರನೆಯ ಬಾರಿ ಉಲ್ಲಂಘಿಸಿದರೆ 25 ಸಾವಿರ ರೂ. ದಂಡ ಹಾಗೂ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯದ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಯಶಸ್ಸಿಗೆ ಪ್ಲಾಸ್ಟಿಕ್ ಬ್ಯಾಗ್ ತಯಾರಕರು ಹಾಗೂ ಮಾರಾಟಗಾರರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
Discussion about this post